ರಾಯಚೂರು

'ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಲಿ'

Published On :

ಕನ್ನಡಪ್ರಭ ವಾರ್ತೆ  ಸಿಂಧನೂರು  ಜು.6
ಮಾನವರು ತಮ್ಮ ಅನುಕೂಲಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಒಂದೆಡೆ ಕಾಡುಗಳ ನಾಶ ಇನ್ನೊಂದೆಡೆ ಅತಿಯಾದ ಯಂತ್ರಗಳ ಬಳಕೆಯಿಂದ ವಾತಾವರಣದಲ್ಲಿ ಇಂಗಾಲ ಡೈ ಆಕ್ಸೈಡ್ ಹೆಚ್ಚಾಗುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಿದೆ ಎಂದು ಸರ್ವೋದಯ ಶಾಲೆಯ ಶಿಕ್ಷಕ ಮಲ್ಲಿಕಾರ್ಜುನ ಹೇಳಿದರು.
ತಾಲೂಕಿನ ಅಲಬನೂರು ಗ್ರಾಮದ ಒಳಬಳ್ಳಾರಿ ಚನ್ನಬಸವೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಸಪ್ತಾಯ ಮುಕ್ತಾಯ ಸಮಾರಂಭದಲ್ಲಿ ಮಕ್ಕಳಿಗೆ ತಿಳಿವಳಿಕೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಪರಿಸರದಲ್ಲಿ ತಾಪಮಾನ ಹೆಚ್ಚುತ್ತಿದೆ. ಇದರಿಂದ ಮಾನವನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತ ಸಸಿಗಳನ್ನು ನೆಡಬೇಕಿದೆ. ಜೊತೆ ಇಂಗಾಲದ ಡೈ ಆಕ್ಸೈಡ್ ಬಿಡುವಂತಹ ವಾಹನಗಳ ಬಳಕೆಯನ್ನು ಕಡಿಮೆ ಮಾಡಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಇಕೋ ಕ್ಲಬ್‌ನ ಅಧ್ಯಕ್ಷ ಸುರೇಶ ಕೆ.ಎಂ. ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಮಹಿಬೂಬ್, ಇಕೋ ಕ್ಲಬ್ ಮಾರ್ಗದರ್ಶಕ ಆನಂದ ಆಶ್ರೀತ್, ಶಿಕ್ಷಕರಾದ ನಾಗಪ್ಪ, ಎಮ್.ಎನ್. ಚಕ್ಕಡಿ ವೇದಿಕೆಯಲ್ಲಿದ್ದರು. ದುರುಗಮ್ಮ ಪ್ರಾರ್ಥಿಸಿದಳು. ರಘು ವಂದಿಸಿದರು.
ಪರಿಸರ ಜಾಗೃತಿ ಸಪ್ತಾಹದ ಅಂಗವಾಗಿ ಒಂದು ವಾರದಿಂದ ಪ್ರತಿದಿನ ಪರಿಸರ ಜಾಗೃತಿ ಮೂಡಿಸುವ ಪ್ರಬಂಧ, ಆಶುಭಾಷಣ, ಇಂದು ಗುಂಡಿ ತೆಗೆಯುವುದು ಇನ್ನೂ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಂತರ ಶಾಲೆಯ ಆವರಣದಲ್ಲಿ ಸಸಿಯನ್ನು ನೆಡುವ ಮೂಲಕ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.