ರಾಯಚೂರು

ಬಡ ಪ್ರತಿಭಾನ್ವಿತರಿಗೆ ಪ್ರೋತ್ಸಾಹ ಅಗತ್ಯ

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.7
ಬಡತನದ ಮಧ್ಯೆಯೂ ಸರ್ಕಾರಿ ಸೌಲಭ್ಯ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಭಾನ್ವಿತ ವಿದಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವ ಮೂಲಕ ಪ್ರೋತ್ಸಾಹಿಸುತ್ತಿರುವ ದಲಿತ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಮಕ್ಕಳ ತಜ್ಞ ಡಾ. ಕೆ.ಶಿವರಾಜ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ದಲಿತ ಸೇನೆ ಮತ್ತು ಸಿಂಧೂರ ಪ್ರಜಾರಕ್ಷಣಾ ಸೇನೆ ಸಂಘಟನೆಗಳು ಹಮ್ಮಿಕೊಂಡಿದ್ದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಬಡವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಬಡತನ ಮೀರಿ ಬೆಳೆಯಬೇಕು: ವಿದ್ಯಾರ್ಥಿಗಳ ಬಡತನ ಅವರಿಗೆ ಶಾಪವಾಗಬಾರದು. ಅವರು ಅದನ್ನು ಮೀರಿ ಬೆಳೆಯಬೇಕು. ಅಂದಾಗ ಇಂತಹ ಸಂಘಟನೆಗಳ ಕಾರ್ಯ ಸಾರ್ಥಕವಾಗುತ್ತದೆ ಎಂದರು. ಪತ್ರಕರ್ತ ಡಿ.ಎಚ್. ಕಂಬಳಿ ಮಾತನಾಡಿದರು.
ದಲಿತ ಸೇನೆ ಮತ್ತು ಸಿಂಧೂರ ಪ್ರಜಾರಕ್ಷಣಾ ವೇದಿಕೆ ಅಧ್ಯಕ್ಷ ನಾಗರಾಜ ಬೊಮ್ಮನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಕೆ.ಮರಿಯಪ್ಪ, ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ, ನಗರ ಪೊಲೀಸ್ ಠಾಣೆ ಪಿಎಸ್‌ಐ ನಿಂಗಪ್ಪ ಎನ್.ಆರ್., ಎಪಿಎಂಸಿ ನಿರ್ದೇಶಕ ಶರಣೇಗೌಡ ಗಿಣಿವಾರ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಮುಖಂಡ ಶಿವಬಸನಗೌಡ ಗೊರೇಬಾಳ, ಬಿಜೆಪಿ ನಗರಾಧ್ಯಕ್ಷ ಮಧ್ವರಾಜ ಆಚಾರ್ಯ, ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಸನ್ಮಾನ: ವಿದ್ಯಾರ್ಥಿಗಳಿಗೆ ಸುಮಾರು 100 ಉಚಿತ ನೋಟ್‌ಬುಕ್ ವಿತರಣೆ ಮಾಡಿದ ವಿದ್ಯಾರ್ಥಿನಿ ಆಶಾ ಬೊಮ್ಮನಾಳ ಅವರನ್ನು ಸನ್ಮಾನಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ಸಿದ್ದೇಶ್ವರಿ ನಿರೂಪಿಸಿದರು. ಪ್ರಜಾರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ನೂರಪ್ಪ ಕಟ್ಟಿಮನಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.