ಯೋಜನೆ ಲಾಭ ಪಡೆಯಲು ಸಲಹೆ
ದೇವದುರ್ಗ: ಸರ್ಕಾರದ ಪ್ರತಿಯೊಂದು ಯೋಜನೆಗಳ ಲಾಭ ಪಡೆಯಲು ರೈತರು ಕಚೇರಿಗಳಿಗೆ ಅಲೆದಾಟ ತಪ್ಪಿಸಲು, ಸಮಸ್ಯೆ ಪರಿಹರಿಸಲು ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದು ತಾಲೂಕಿನ ವಿವಿಧ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಇಲಾಖೆಯ ಕೆಲಸಗಳಲ್ಲಿ ತೊಡಗಿ ಸಮಸ್ಯೆಗಳಿಗೆ ಸ್ಪಂದಿಸುವಂತೆ ಶಾಸಕ ಎ.ವೆಂಕಟೇಶ ನಾಯಕ ಸೂಚಿಸಿದರು.
ತಾಲೂಕಿನ ಗಬ್ಬೂರು ಹೋಬಳಿ ವ್ಯಾಪ್ತಿಯ ರಾಮದುರ್ಗ ಗ್ರಾಪಂ ಆವರಣದಲ್ಲಿ ನಡೆದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಾಮಾನ್ಯರೂ ಅಧಿಕಾರಿಗಳಿಗೆ ಸಹಕಾರ ನೀಡುವ ಮೂಲಕ ಗ್ರಾಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಪಡಿತರ ಕಾರ್ಡ್ ವಿತರಣೆ, ಪಡಿತರ ಕಾರ್ಡ್ ಪಡೆಯಲು ಅನುಭವಿಸುತ್ತಿರುವ ತೊಂದರೆ ಬಗ್ಗೆ ಗ್ರಾಮಸ್ಥರು ಶಾಸಕರಿಗೆ ಅಹವಾಲು ಸಲ್ಲಿಸಿದರು. ವಿದ್ಯುತ್ ಅಭಾವ, ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಮತ್ತಿತರೆ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ದೂರು ಕೇಳಿಬಂದಿತು. ಈ ವೇಳೆ ವಿವಿಧ ಮಾಶಾಸನದ ಆದೇಶ ಪ್ರತಿಗಳನ್ನು 60 ಜನರಿಗೆ ವಿತರಿಸಲಾಯಿತು.
ಸಭೆಯಲ್ಲಿ ತಹಸೀಲ್ದಾರ್ ತುಕಾರಾಮ್ ಕಲ್ಯಾಣಕರ್, ಮಾಜಿ ಎಂಲ್ಸಿ ಬಸವರಾಜ ಪಾಟೀಲ್ ಇಟಗಿ, ಭೀಮನಗೌಡ ನಾಗಡದಿನ್ನಿ, ಗಂಗನಗೌಡ ರಾಮದುರ್ಗ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರ್, ವೆಂಕಟೇಶ ಉಗಿಬಂಡಿ, ಮಹಾದೇವಪ್ಪ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

