ಜೀತ ವಿಮುಕ್ತರಿಗೆ ಬಜೆಟ್ನಲ್ಲಿ ಪ್ರತ್ಯೇಕ ಹಣ ಮೀಸಲಿಡಲು ಆಗ್ರಹ
ಕ.ಪ್ರ. ವಾರ್ತೆ, ಸಿಂಧನೂರು, ಜು.8
2013ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಜೀತ ವಿಮುಕ್ತರಿಗೆ ಪ್ರತ್ಯೇಕ ಹಣವನ್ನು ಮೀಸಲಿಡುವಂತೆ ಕರ್ನಾಟಕ ಜೀತದಾಳು ಮತ್ತು ಕಾರ್ಮಿಕರ ಒಕ್ಕೂಟ ತಹಸೀಲ್ದಾರರ ಮೂಲಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿ ಆಗ್ರಹಿಸಿತು.
ಜಿಲ್ಲೆಯಲ್ಲಿ ಇನ್ನೂ ಜೀತ ಪದ್ಧತಿ ಜೀವಂತವಾಗಿದೆ. ಅನೇಕ ಕುಟುಂಬಗಳು ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿವೆ. ಅಧಿಕಾರಿಗಳು ಗುರುತಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅವರಿಗೆ ಯಾರ ನೆರವೂ ಇಲ್ಲದಂತಾಗಿದೆ. ಶ್ರೀಮಂತ ವರ್ಗದವರು ಬಡ ಕೂಲಿಕಾರ್ಮಿಕರನ್ನು ಕನಿಷ್ಠ ಕೂಲಿ ನೀಡದೆ ದುಡಿಸಿಕೊಳ್ಳುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಲಾಯಿತು.
ಬೇಡಿಕೆಗಳು: ಜೀತದಾಳುಗಳ ಮರು ಸಮೀಕ್ಷೆ ನಡೆಸುವುದು, ಜೀತ ವಿಮುಕ್ತರಿಗೆ 2 ಲಕ್ಷ ಪರಿಹಾರ ಧನ ನೀಡಬೇಕು, ಜಿಲ್ಲಾ ಮಟ್ಟದಲ್ಲಿ ಹಿರಿಯ ಶ್ರೇಣಿಯ ಅಧಿಕಾರಿ ನೇಮಕ, ಜಿಲ್ಲಾ ಮತ್ತು ಉಪವಿಭಾಗ ಮಟ್ಟದ ಜಾಗ್ರತ ಸಭೆಯನ್ನು ಪ್ರತಿ 2 ತಿಂಗಳಿಗೊಮ್ಮೆ ನಡೆಸುವುದು, ಜಿಲ್ಲಾ ಮಟ್ಟದಲ್ಲಿ ಎಟಿಜಟಿ ಅಧಿಕಾರಿಗಳಿಗೆ ಜೀತ ಕಾನೂನಿನ ಬಗ್ಗೆ ತರಬೇತಿ ಕಾರ್ಯಾಗಾರ, ಜೀತ ವಿಮುಕ್ತರಿಗೆ 5 ಎಕರೆ ಸರ್ಕಾರಿ ಭೂಮಿ ನೀಡಿಕೆ, ಜೀತದಾಳು ಕುಟುಂಬದ ಮಹಿಳೆಯರು ರಚಿಸಿರುವ ಸ್ವಸಹಾಯ ಗುಂಪುಗಳಿಗೆ ವಿಶೇಷ ಅನುದಾನ ಮತ್ತು ಸಾಲ ಸೌಲಭ್ಯ ಒದಗಿಸಬೇಕು.
ಬಾಲ ಜೀತದಾಳುಗಳಿಗೆ ವಿಶೇಷ ಆದ್ಯತೆ ಮೇರೆಗೆ ಪ್ರತಿಷ್ಠಿತ ವಸತಿ ಶಾಲೆಗಳಿಗೆ ಅವಕಾಶ ಕಲ್ಪಿಸಬೇಕೆಂಬುದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಮಾಡಲಾಯಿತು. ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ತಾಲೂಕು ಸಂಚಾಲಕ ಎಂ.ಯುವರಾಜ, ಹೋಬಳಿ ಸಂಚಾಲಕ ದೇವಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

