ಹೋಬಳಿ ಪಿಂಚಣಿ ಅದಾಲತ್
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಜು.8
ಸಾಮಾಜಿಕ ಭದ್ರತಾ ಯೋಜನೆಗಳ ನಿರ್ದೇಶನಾಲಯದ ಆದೇಶದ ಮೇರೆಗೆ ಪ್ರತಿ ಸೋಮವಾರ ಒಂದೊಂದು ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಲಾಗುವುದೆಂದು ಸಹಾಯಕ ಆಯುಕ್ತ ಟಿ. ಯೋಗೇಶ ಸ್ಪಷ್ಟಪಡಿಸಿದರು.
ಸ್ಥಳೀಯ ಕಂದಾಯ ಇಲಾಖೆಯ ನಾಡತಹಸೀಲ್ದಾರ್ ಕಚೇರಿಯಲ್ಲಿ ಅಂಗವಿಕಲ, ವಿಧವಾ, ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ಈ ಹಿಂದೆ ರದ್ದಾದ ಮತ್ತು ಹೊಸದಾಗಿ ಅರ್ಜಿಸಲ್ಲಿಸಲು ಸೋಮವಾರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ 2012ರ ಆರಂಭದಲ್ಲಿ ಸಾಮಾಜಿಕ ಭದ್ರತಾ ಯೋಜನೆ ಲಾಭ ಪಡೆಯಲು ಸಲ್ಲಿಸಿದ ಅರ್ಜಿಗಳು ಭೌತಿಕ ತಪಾಸಣೆ ಸಮಯದಲ್ಲಿ ಫಲಾನುಭವಿಗಳು ತಿರಸ್ಕೃತಗೊಂಡ ಪರಿಣಾಮ ಫಲಾನುಭವಿಗಳ ವೇತನ ರದ್ದು ಪಡಿಸಲಾಗಿತ್ತು.
ಪ್ರಸ್ತುತ ಸಾಮಾಜಿಕ ಭದ್ರತಾ ಯೋಜನೆಗಳ ನಿರ್ದೇಶನಾಲಯದ ಆದೇಶದ ಮೇರೆಗೆ ಈ ಹಿಂದೆ ಭೌತಿಕ ಪರಿಶೀಲನೆಯಲ್ಲಿ ರದ್ದಾದ ಫಲಾನುಭವಿಗಳನ್ನು ಪುನಃ ಮಂಜೂರಾತಿಗೆ ಕೋರಿ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಅನುಕೂಲವಾಗಲೆಂದು ಪ್ರತಿ ಸೋಮವಾರ, ಪ್ರತಿ ಹೋಬಳಿಯ ನಾಡ ತಹಸೀಲ್ದಾರ್ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುವುದು.
ಅದರಂತೆ ಪ್ರಥಮವಾಗಿ ಲಿಂಗಸ್ಗೂರು ಹೋಬಳಿ ಮಟ್ಟದಲ್ಲಿ ಜು.8ರಂದು ಪಿಂಚಣಿ ಅದಾಲತ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ. ಈ ಹಿಂದೆ ರದ್ದಾಗಿ ಪುನಃ ಮಂಜೂರಾತಿಗೆ ಕೋರಿ ಹೆಚ್ಚಿನ ಅರ್ಜಿಗಳು ಬಂದಿದ್ದು, ಹೊಸದಾಗಿ ಅರ್ಜಿಗಳು ಕಡಿಮೆ ಸಲ್ಲಿಕೆಯಾಗಿರುತ್ತವೆ. ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಪಿಂಚಣಿ ಅದಾಲತ್ ಸಹಕಾರಿಯಾಗಲಿದ್ದು, ಅರ್ಹರಲ್ಲದವರು ಅರ್ಜಿ ಸಲ್ಲಿಸಿರುವುದು ಕಂಡು ಬಂದರೆ, ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

