ರಾಯಚೂರು

ಇಂದು ಶಾಲೆಗೆ ಬೀಗ: ಪ್ರತಿಭಟನೆ

Published On :

ದೇವದುರ್ಗ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಉರ್ದು ಮಾಧ್ಯಮಗಳ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹಿಸಿ ಜು.10ರಂದು ಶಾಲೆಗೆ ಬೀಗಮುದ್ರೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಈ ಬಗ್ಗೆ ಮನವಿ ಸಲ್ಲಿಸಿ, ತಾಲೂಕಿನ ಗಣೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಉರ್ದು ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದೆ. ಶಿಕ್ಷಕರಿಲ್ಲದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಶಿಕ್ಷಕರ ಕೊರತೆ ನಿಭಾಯಿಸುವಲ್ಲಿ ಅಧಿಕಾರಿಗಳು ವಿಫರಾಗಿರುವುದರಿಂದ ಜು.10 ರಂದು ಶಾಲೆಗೆ ಬೀಗ ಹಾಕಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇಂದು ಸಂಘದಿಂದ ರಾಯಚೂರು ಚಲೋ
ದೇವದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.10ರಂದು ಅಂಗನವಾಡಿ ನೌಕರರ ಸಂಘದಿಂದ ರಾಯಚೂರು ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವವರಿಗೆ ಶಿಕ್ಷೆ ನೀಡಬೇಕು. ಮಹಿಳಾ ನೌಕರರೊಂದಿಗೆ ಸೌಜನ್ಯದಿಂದ ಮೇಲಧಿಕಾರಿಗಳು ಹಾಗೂ ಜನತೆ ವರ್ತಿಸಬೇಕು. ಮಾರುಕಟ್ಟೆಯ ಬೆಲೆ ದಿನದಿನೇ ಗಗನಕ್ಕೆ ಏರುತ್ತಿದ್ದು, ಬೆಲೆ ನಿಯಂತ್ರಿಸಬೇಕು. ಅಂಗನವಾಡಿ ನೌಕರರಿಗೆ ಗೌರವ ಧನದ ಬದಲಿಗೆ ಕಾರ್ಮಿಕರೆಂದು ಪರಿಗಣಿಸಬೇಕೆಂದು ಒತ್ತಾಯಿಸಲಾಗುತ್ತದೆ ಎಂದು ಸಂಘ ತಿಳಿಸಿದೆ. ಈ ಹೋರಾಟದಲ್ಲಿ ಪಾಲ್ಗೊಳ್ಳುವಂಂತೆ ದೇವದುರ್ಗ  ಅಂಗನವಾಡಿ ನೌಕರ ಸಂಘ ಮನವಿ ಮಾಡಿದೆ.
ಡಿಕ್ಕಿ: ಮಹಿಳೆ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಬಸಣ್ಣ ಕ್ಯಾಂಪಿನ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವಿಗೀಡಾಗಿದ್ದಾಳೆ. ಮೃತಳನ್ನು ಅಮರಮ್ಮ ಎಂದು ಗುರುತಿಸಲಾಗಿದೆ. ಈಕೆ ರಸ್ತೆ ಬದಿ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡ ಆಕೆಯನ್ನು ಚಿಕಿತ್ಸೆಗಾಗಿ ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಪಘಾತ; ಗಾಯ
ಸಿಂಧನೂರು: ಸಿಂಧನೂರು ತಾಲೂಕಿನ ಹೊಸಳ್ಳಿ ಕ್ಯಾಂಪ್(ಇ.ಜೆ.) ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಚಾಲಕರು ಹಾಗೂ ಇತರೆ ಆರು ಜನರಿಗೆ ಗಾಯಗಳಾದ ಘಟನೆ ನಡೆಯಿತು. ಸಿಂಧನೂರಿನಿಂದ ಬಳ್ಳಾರಿಗೆ ಹೊರಟಿದ್ದ ಮಸ್ಕಿ ಡಿಪೋದ ಕೆಎಸ್‌ಆರ್‌ಟಿಸಿ ಬಸ್- ಲಾರಿಯೊಂದನ್ನು ಹಿಂದೆ ಹಾಕಲು ಹೋಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆಯಿತು. ಈ ಅಪಘಾತದಲ್ಲಿ ಚಾಲಕರು ಸೇರಿದಂತೆ ಆರು ಜನರಿಗೆ ಗಾಯಗಳಾಗಿವೆ. ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.