ರಾಯಚೂರು

ದಲಿತರಿಗೆ ಶೇ.23ರಷ್ಟು ಹಣ ಮೀಸಲಿಗೆ ಆಗ್ರಹ

Published On :

ಲಿಂಗಸ್ಗೂರು: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ದಲಿತರಿಗೆ ಶೇ. 23 ರಷ್ಟು ಹಣ ಮೀಸಲಿರಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ ಹಾಗೂ ತಾಲೂಕು ಸಂಚಾಲಕ ಹರೀಶ ರಾಠೋಡ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ. ಪರಿಶಿಷ್ಟಜಾತಿ, ವರ್ಗಗಳಿಗೆ ಸದುಪಯೋಗವಾಗುವ ಯೋಜನೆ ರೂಪಿಸಿ ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳ್ಳುವಂತೆ ನಿರ್ವಹಿಸಲು ಪ್ರತ್ಯೇಕ ಮಂಡಳಿ ರಚಿಸಬೇಕು. ಏಕಗವಾಕ್ಷಿ ಯೋಜನೆ ಜಾರಿಗೆ ತರಬೇಕು. ಫಲಾನುಭವಿಗಳ ಆಯ್ಕೆ ಸಮಿತಿಗೆ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆ ರದ್ದುಗೊಳಿಸಬೇಕು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈಪವರ್ ಕಮಿಟಿ 6 ತಿಂಗಳಿಗೊಮ್ಮೆ ಕರೆಯಬೇಕು. ಎಲ್ಲ ಬ್ಯಾಕ್‌ಲಾಗ್ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಮಾಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ವಸತಿ ನಿಲಯಗಳ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಪ್ರಾರಂಭಿಸಬೇಕು. ಪೀಠೋಪಕರಣಗಳು ಮತ್ತು ಪಾಠೋಪಕರಣಗಳನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕು. ವಸತಿ ನಿಲಯದಲ್ಲಿ ನಿರಂತರ ಪಾಠ ಏರ್ಪಾಟು ಮಾಡಬೇಕು. ಅಸಂಘಟಿತ ವಲಯದಲ್ಲಿನ ಪರಿಶಿಷ್ಟಜಾತಿ, ವರ್ಗದ ಕಾರ್ಮಿಕರ ಸಮೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.