'ನೌಕರರ ಸಮಸ್ಯೆಗಳಿಗೆ ಸಂಘದ ಸ್ಪಂದನೆ'
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.9
ತಾಲೂಕಿನ ಸರ್ಕಾರಿ ನೌಕರರ ಸಮಸ್ಯೆಗಳಿಗೆ ತಮ್ಮ ಆಡಳಿತಾವಧಿಯಲ್ಲಿ ಶಕ್ತಿ ಮೀರಿ ಸ್ಪಂದಿಸಿರುವ ತೃಪ್ತಿ ಇರುವುದಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಹೇಳಿದರು.
ತಮ್ಮ ಆಡಳಿತ ಅವಧಿ ಮುಗಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಂಗಳವಾರ ಮಾತನಾಡಿದರು. ಅವರು ನೌಕರರ ಸಂಘದ ಬಹುದಿನದ ಬೇಡಿಕೆಯಾದ ನೌಕರರ ಸಂಘದ ಭವನ ನಿರ್ಮಾಣಕ್ಕಾಗಿ ನಿವೇಶನ ಒದಗಿಸುವಂತೆ ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ, ಮಾಜಿ ಉಪಾಧ್ಯಕ್ಷ ಕೆ. ಜಿಲಾನಿಪಾಷ ಅವರ ಅವಧಿಯಲ್ಲಿ ಮನವಿ ಸಲ್ಲಿಸಲಾಗಿದೆ.
ದೌರ್ಜನ್ಯದ ವಿರುದ್ಧ ನಿರಂತರ ಹೋರಾಡ: ನೌಕರರ ವೇತನ ಪರಿಷ್ಕರಣೆ ಮತ್ತು ನಗರ ಪರಿಹಾರ ಭತ್ಯೆಯನ್ನು ಶೇ.10 ರಷ್ಟು ಪಡೆಯುವಲ್ಲಿ ಸಂಘ ಯಶಸ್ವಿಯಾಗಿದೆ. ನೌಕರರ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಬಂದ ಹೆಮ್ಮೆ ತಮಗಿರುವುದಾಗಿ ಅವರು ವಿವರಿಸಿದರು.
ವಿವಿಧ ಇಲಾಖೆಯ ನೌಕರರ ಮತ್ತು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಅಧಿಕಾರಿಗಳು, ನೌಕರ ವರ್ಗದವರು, ಕನ್ನಡಪರ ಸಂಘಟನೆಗಳು, ಸಂಘ- ಸಂಸ್ಥೆಗಳ ಮುಖಂಡರು ಸಹಕರಿಸಿದ್ದಾರೆ. ಅಲ್ಲದೇ ನೌಕರರಲ್ಲಿದ್ದ ಹಲವಾರು ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಲು ಪ್ರಾಮಾಣಿಕವಾಗಿ ಸ್ಪಂದಿಸಿರುವುದಾಗಿ ಹೇಳಿದ ಅವರು ಮುಂದಿನ ದಿನಗಳಲ್ಲಿ ತಾಲೂಕಿನ ನೌಕರರಿಗೆ ಅನುಕೂಲವಾಗುವಂತಹ ಭವ್ಯವಾದ ನೌಕರರ ಭವನ ನಿರ್ಮಾಣದ ಗುರಿಯನ್ನು ಹೊಂದಿರುವುದಾಗಿ ಚಂದ್ರಶೇಖರ ಹಿರೇಮಠ ತಿಳಿಸಿದರು.
ಹಲ್ಲೆಗೆ ಖಂಡನೆ: ಮಾನ್ವಿ ತಾಲೂಕಿನ ಗೋರಕಲ್ ಗ್ರಾಪಂ ಅಭಿವೃದ್ಧಿ ಅಧಿಕಾರಿ ತಿಮ್ಮಪ್ಪ ಅವರ ಮೇಲೆ ಗ್ರಾಮದ ಕೆಲವರು ನಡೆಸಿರುವ ಹಲ್ಲೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು ಹಲ್ಲೆಕೋರರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು. ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸರ್ಕಾರಿ ನೌಕರರ ಮೇಲೆ ಹಲ್ಲೆಯಾಗದಂತೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

