ಬಿಎಸ್ಸೆನ್ನೆಲ್ ಕಾರ್ಮಿಕರ ಹೋರಾಟಕ್ಕೆ ನಾಡಗೌಡ ಬೆಂಬಲ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.9
ನಗರದ ಬಿಎಸ್ಎನ್ಎಲ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರು ತಮ್ಮ ಹಲವು ಬೇಡಿಕೆಗಳನ್ನಿಟ್ಟುಕೊಂಡು ನಡೆಸುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ಜೆಡಿಎಸ್ ವಕ್ತಾರ ಬಸವರಾಜ ನಾಡಗೌಡ ಬೆಂಬಲ ವ್ಯಕ್ತಪಡಿಸಿದರು.
ಬಿಎಸ್ಎನ್ಎಲ್ ಕಚೇರಿಯ ಮುಂಭಾಗದಲ್ಲಿ ಕೈಗೊಂಡಿರುವ ಕಾರ್ಮಿಕರ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಅವರು ಸಂಘದ ತಾಲೂಕು ಅಧ್ಯಕ್ಷ ಮುತ್ತಯ್ಯ, ಸಹಕಾರ್ಯದರ್ಶಿ ಗೌತಮ್ ಮತ್ತಿತರರು ಕಳೆದ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ ಇಲಾಖೆ ತಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಭವಿಷ್ಯ ನಿಧಿ ನೀಡುತ್ತಿಲ್ಲ. 2001 ರಿಂದ 2013 ವರೆಗಿನ ಪಿ.ಎಫ್. ಹಣ 12.20 ಲಕ್ಷ ಹಾಗೂ 2004 ರಿಂದ ಇಲ್ಲಿಯವರೆಗಿನ 6.40 ಲಕ್ಷ ಹಣ ಬಾಕಿ ಉಳಿದಿದೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಡುವೆ ತಮಗೆ ಸಿಗಬೇಕಾದ ನ್ಯಾಯಯುತ ವೇತನವನ್ನು ಕೊಡುತ್ತಿಲ್ಲವೆಂದು ತಿಳಿಸಿದರು.
ಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಿ ಕನಿಷ್ಠ ವೇತನ 10 ಸಾವಿರ ಕೊಡಬೇಕು. 12 ಗಂಟೆಗಳ ಕಾಲ ದುಡಿಸಿಕೊಳ್ಳುವುದನ್ನು ಕೈಬಿಟ್ಟು 8 ತಾಸು ಮಾತ್ರ ದುಡಿಸಿಕೊಳ್ಳಬೇಕು. 2001 ರಿಂದ ಇಲ್ಲಿಯವರೆಗೆ ಪಿ.ಎಫ್. ಹಣ ನೀಡದೆ ಅನ್ಯಾಯ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಮತ್ತಿತರ ಬೇಡಿಕೆಗಳನ್ನು ನಾಡಗೌಡರಿಗೆ ವಿವರಿಸಿದರು.
ತಮಗಾಗಿರುವ ಅನ್ಯಾಯದ ಬಗ್ಗೆ ರಾಯಚೂರು ಜನರಲ್ ಮ್ಯಾನೇಜರ್ ಅವರಿಗೆ ಜೂ.1 ರಂದು ಮನವಿ ಕೊಡಲಾಗಿದೆ. ಜೂ.14 ರಂದು ಮುಖ್ಯಮಂತ್ರಿಗೆ ಹಾಗೂ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ. ಲಿಂಗಸ್ಗೂರು ಉಪವಿಭಾಗದ ಎಂಜಿನಿಯರ್ ಎ.ಜಿ.ಎಂ. ಪ್ರಾಣೇಶ ಅವರಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ. ಕಾರಣ ಜು.1 ರಿಂದ ಅನಿರ್ಧಿಷ್ಟ ಧರಣಿ ಹಮ್ಮಿಕೊಂಡಿದ್ದು, ಬೇಡಿಕೆ ಈಡೇರುವವರೆಗೆ ಚಳವಳಿಯನ್ನು ಹಿಂತೆಗೆದುಕೊಳ್ಳುವುದಿಲ್ಲವೆಂದು ತಾಲೂಕು ಅಧ್ಯಕ್ಷ ಮುತ್ತಯ್ಯ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

