ಸದಾಶಿವ ವರದಿ ಜಾರಿಗೆ ಪ್ರತಿಭಟನೆ
ಮಸ್ಕಿ: ಪ್ರಸಕ್ತ ರಾಜ್ಯ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾವಾರು ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಮಾದಿಗ ಛಲವಾದಿ ಮೀಸಲಾತಿ ಹೋರಾಟ ಸಮಿತಿಯಿಂದ ಬುಧವಾರ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಪ್ರತಿಮೆಯ ಸ್ಥಳದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು, ಸರ್ಕಾರಕ್ಕೆ ಮನವಿ ಸಲ್ಲಿಸಿ, 50 ವರ್ಷಗಳಿಂದ ವಿದ್ಯೆ, ಉದ್ಯೋಗ ಹಾಗೂ ಸರ್ಕಾರದ ಸವಲತ್ತುಗಳಿಂದ ವಂಚಿತರಾಗಿ ಅನ್ಯಾಯ ಅನುಭವಿಸುತ್ತಿರುವ ಮಾದಿಗ ಹಾಗೂ ಛಲವಾದಿ ಸಮಗಾರ, ಡೋಹಾರ, ಮೋಚಿ, ಮೆಹತಾ, ಹರಳಯ್ಯ, ದೊಂಬಿದಾಸ, ಹೊಲೆಯದಾಸ, ಚನ್ನದಾಸ, ಸುಡುಗಾಡಸಿದ್ದ, ಸಿಳ್ಳೆಖ್ಯಾತ ಸೇರಿ ನೂರಾರು ಉಪಜಾತಿಗಳಿಗೆ ಶಾಸನಬದ್ದವಾಗಿ ನೀಡಿದ ಜಾತಿ, ಜನಸಂಖ್ಯಾವಾರು ಮೀಸಲಾತಿಯನ್ನು ವರ್ಗೀಕರಿಸಿ ಸಹಜ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ದಲಿತ ಮುಖಂಡರಾದ ದೊಡ್ಡಪ್ಪ, ಸಿ. ದಾನಪ್ಪ, ಹನುಮಂತಪ್ಪ ವೆಂಕಟಾಪೂರು, ಮಲ್ಲಯ್ಯ ಬಳ್ಳಾ, ಅಶೋಕ, ಯಮನೂರು ಒಡೆಯರ್, ಮಲ್ಲಪ್ಪ ವಕೀಲ, ನಾಗಪ್ಪ ಇನ್ನಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

