ಶಾಸಕರ ನಿವಾಸದೆದುರು ಧರಣಿ: ಮನವಿ ಸಲ್ಲಿಕೆ
ಸಿಂಧನೂರು: ಬರುವ ಅಧಿವೇಶನದಲ್ಲಿ ನ್ಯಾ.ಎ.ಜೆ. ಸದಾಶಿವ ವರದಿ ಅಂಗೀಕರಿಸಿ, ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾವಾರು ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಮಾದಿಗ- ಚಲುವಾದಿ ಮೀಸಲಾತಿ ಹೋರಾಟ ಸಮಿತಿ ಬುಧವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿತು. ಮಧ್ಯಾಹ್ನ ಪ್ರವಾಸಿ ಮಂದಿರದಿಂದ ನೂರಾರು ಸಂಖ್ಯೆಯಲ್ಲಿ ಹೋರಾಟ ಸಮಿತಿ ಕಾರ್ಯಕರ್ತರು ಶಾಸಕ ಹಂಪನಗೌಡ ಬಾದರ್ಲಿ ನಿವಾಸಕ್ಕೆ ಆಗಮಿಸಿದರು. ಅಲ್ಲಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಖಾಲಿ ಇರುವ ಹುದ್ದೆಗಳ ಭರ್ತಿಗೊಳಿಸಿ: ಕಾಂಗ್ರೆಸ್ ಸರ್ಕಾರವು ಎ.ಜೆ. ಸದಾಶಿವ ವರದಿ ಅವಲೋಕಿಸಿ ಜು.12 ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ಅಂಗೀಕರಿಸಿ, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಬೇಕು. ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ ಹಾಗೂ ಪುರಸಭೆಗಳಲ್ಲಿ ಕಳೆದ 15 ವರ್ಷಗಳಿಂದ ಖಾಯಂ ಸ್ವರೂಪದ ಕೆಲಸವನ್ನು, ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿದರು.
ಬಿಳಿನೆಲೆ-ಕೈಕಂಬದಲ್ಲಿ ಆನೆ ದಾಳಿ
ಸುಬ್ರಹ್ಮಣ್ಯ: ಬಿಳಿನೆಲೆ ಗ್ರಾಮದ ಕೈಕಂಬ ನಡುತೋಟ ನಾಗಣ್ಣ ಗೌಡ ಹಾಗೂ ಗಿರಿಧರ ಗೌಡ ಎಂಬವರ ತೋಟಕ್ಕೆ ಸೋಮವಾರ ರಾತ್ರಿ ಆನೆ ದಾಳಿ ಮಾಡಿ ಅಪಾರ ಬೆಳೆ ಹಾನಿ ಉಂಟು ಮಾಡಿದೆ. ಸೋಮವಾರ ರಾತ್ರಿ ಸುಮಾರು 10.30ರ ಸಮಯದಲ್ಲಿ ನಡುತೋಟದ ಪಕ್ಕದ ಕಾಡಿನ ಕಣಿವೆಯಲ್ಲಿ ಇಳಿದ ಆನೆ ತೋಟಕ್ಕೆ ನುಗ್ಗಿ ಬಾಳೆಗಿಡ, ಕೋಕೋ ಗಿಡ ಮತ್ತು ಸ್ಪ್ರಿಂಕ್ಲರ್ ಪಾಯಿಂಟ್ಗಳನ್ನು ತುಳಿದು ಹಾಳುಗೆಡವಿ ಅಪಾರ ಕೃಷಿ ನಾಶ ಮಾಡಿದೆ.
ಮರಳು ದಿಬ್ಬ ಕುಸಿದು ಇಬ್ಬರು ಸಾವು
ಕೋಲಾರ: ತಾಲೂಕಿನ ಬ್ಯಾಲಹಳ್ಳಿ ಸಮೀಪದ ಅಣ್ಣಿಹಳ್ಳಿಯ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಮರಳು ದಿಬ್ಬ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತರಾಗಿದ್ದಾರೆ. ವೆಂಕಟಮ್ಮ(65) ಹಾಗೂ ಎಲ್ಲಮ್ಮ (40) ಮೃತಪಟ್ಟ ನತದೃಷ್ಟ ಮಹಿಳೆಯರಾಗಿದ್ದು, ಕೂಲಿ ಕೆಲಸಕ್ಕೆ ಹೋಗಿದ್ದಾಗ ದುರಂತ ಸಂಭವಿಸಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

