ರಾಯಚೂರು

ಜನಸಂಖ್ಯೆ ಸ್ಥಿರತೆ ಕುರಿತ ಭಾಷಣ ಸ್ಪರ್ಧೆ

Published On :

ಸಿಂಧನೂರು: ನಗರದ ಶಾರದಾ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಅಡಿಯಲ್ಲಿ ಏರ್ಪಡಿಸಿದ್ದ ಜನಸಂಖ್ಯಾ ಸ್ಥಿರತೆ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕಾ ಆರೋಗ್ಯಾಧಿಕಾರಿ ಡಾ. ಸೈಯದ್, ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಜನರಲ್ಲಿ ಜನಸಂಖ್ಯಾ ಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಈಶ್ವರ ಎಚ್. ದಾಸಪ್ಪನವರ್, ಕಾಲೇಜಿನ ಪ್ರಾಚಾರ್ಯ ಬಸವರಾಜ ಬಾದರ್ಲಿ, ಎನ್‌ಎಸ್‌ಎಸ್ ಅಧಿಕಾರಿ ಎನ್. ಮಂಜುನಾಥ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಆರತಿ ಪ್ರಥಮ, ಲಕ್ಷ್ಮೀ ದ್ವಿತೀಯ, ವಾಣಿಶ್ರೀ ಮತ್ತು ಮುತ್ತಣ್ಣ ತೃತೀಯ ಬಹುಮಾನ ಪಡೆದುಕೊಂಡರು. ಶರಣಮ್ಮ ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಅಧಿಕಾರಿ ರಾಜಣ್ಣ ನಿರೂಪಿಸಿದರು. ಹನುಮೇಶ ಪಾಟೀಲ್ ವಂದಿಸಿದರು.
ಪ್ರಾತಿನಿಧ್ಯಕ್ಕೆ ಒತ್ತಾಯಿಸಿ ಮನವಿ
ರಾಯಚೂರು: ವಿವಿಧ ಅಕಾಡೆಮಿಗಳಿಗೆ ನೇಮಕಾತಿ ಮಾಡುವ ವೇಳೆ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ಈ ಕುರಿತು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ವೇಳೆ ಮನವಿ ಸಲ್ಲಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಮತ್ತಿತರರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜಿಲ್ಲೆಗೆ ಮತ್ತಷ್ಟು ಪ್ರಾಧಾನ್ಯತೆ ಸರ್ಕಾರ ಮಟ್ಟದಲ್ಲಿ ನೀಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ ಅನೇಕರಿದ್ದಾರೆ. ಅಂಥವರಿಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದುವರೆಗೆ ಸೂಕ್ತ ಅವಕಾಶ ನೀಡಿಲ್ಲ. ಅಕಾಡೆಮಿಗಳಿಗೆ ನೇಮಕಾತಿ ವೇಳೆ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಿದ್ದಾರೆ. ಶಾಸಕರಾದ ವೆಂಕಟೇಶ ನಾಯಕ, ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ಜಿ.ಬಸವರಾಜ ರೆಡ್ಡಿ, ಅಮರೇಗೌಡ ಹಂಚಿನಾಳ ಇದ್ದರು.
ಇಂದಿನಿಂದ ಮಕ್ಕಳ ಚಿತ್ರೋತ್ಸವ
ರಾಯಚೂರು: ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ಜು.12ರಂದು ಜಿಲ್ಲಾ ಮಟ್ಟದ ಮಕ್ಕಳ ಚಲನ ಚಿತ್ರೋತ್ಸವದ ಉದ್ಘಾಟನೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 7.30ಕ್ಕೆ ಚಿತ್ರೋತ್ಸವವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಲಿದ್ದು, ಚಿತ್ರೋತ್ಸವವು ಜಿಲ್ಲೆಯ ಆಯ್ದ ಚಿತ್ರಮಂದಿರಗಳಲ್ಲಿ ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಜು.12ರಿಂದ 18ರವರೆಗೆ ನಡೆಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.