18 ರಂದು ವಿಧಾನಸೌಧ ಚಲೋ
ರಾಯಚೂರು: ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕಾರ್ಮಿಕರ ಪರವಾಗಿಲ್ಲ. ಸರ್ಕಾರದ ಹಮಾಲಿ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಜು.18ರಂದು ವಿಧಾನಸೌಧ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ರಾಜ್ಯಾಧ್ಯಕ್ಷ ಮಹೇಶ್ ಪತ್ತಾರ್ ತಿಳಿಸಿದರು.
ಅವರು ನಗರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ಅಹಿಂದ ಪರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಅಲ್ಪಸಂಖ್ಯಾತರು, ದಲಿತರೇ ಹಮಾಲಿ ವೃತ್ತಿಯಲ್ಲಿ ಹೆಚ್ಚಾಗಿದ್ದು, ಹಮಾಲಿ ಕಾರ್ಮಿಕರಿಗೆ ಬಜೆಟ್ನಲ್ಲಿ ವಿಶೇಷ ಅನುದಾನ ನಿಗದಿ ಮಾಡಿಲ್ಲ ಎಂದು ಆರೋಪಿಸಿದರು.
ಕಾರ್ಮಿಕರ ಶೋಷಣೆ: ಅಂತಾರಾಷ್ಟ್ರೀಯ ಕಾರ್ಮಿಕರ ಸಂಘಟನೆಯ ವರದಿಯಂತೆ ಹಮಾಲಿ ಕಾರ್ಮಿಕರು ಕೇವಲ 50 ಕೆಜಿ ಭಾರದ ವಸ್ತುಗಳನ್ನು ಮಾತ್ರ ಕೊಂಡೊಯ್ಯಬಹುದು. ಅದಕ್ಕಿಂತ ಹೆಚ್ಚಿನ ಭಾರದ ವಸ್ತುಗಳನ್ನು ನಿತ್ಯ ಕೊಂಡೊಯ್ಯುವುದರಿಂದ ಹಮಾಲಿ ಕಾರ್ಮಿಕರ ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೇಳಲಾಗಿದೆ. ಆದರೆ ದೇಶದಲ್ಲಿ ಇಂಥ ಯಾವುದೇ ನೀತಿಗಳಿಲ್ಲದಿರುವುದು ಕಾರ್ಮಿಕರ ಶೋಷಣೆಗೆ ಅವಕಾಶ ಮಾಡಿದೆ ಎಂದು ದೂರಿದರು.ರಾಜ್ಯದಲ್ಲಿ 144 ಮುಖ್ಯ ಹಾಗೂ 383 ಉಪಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿದ್ದು, ಅವುಗಳಲ್ಲಿ ಸಾವಿರಾರು ಸಂಖ್ಯೆಯ ಹಮಾಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ 17ಸಾವಿರ ಕೋಟಿ ರು. ವಹಿವಾಟು ನಡೆಸುವ ಎಪಿಎಂಸಿಗಳು ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಹಮಾಲಿ ಕಾರ್ಮಿಕರ ಹಿತ ರಕ್ಷಣೆಗೆ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿದರು.
ಹಿನ್ನಡೆ: ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಐವರು ಎಪಿಎಂಸಿ ನಿರ್ದೇಶಕರ ಬದಲಾವಣೆ ಮಾಡಿದೆ. ಇದರಿಂದಾಗಿ ಆಡಳಿತ ವ್ಯವಸ್ಥೆಗೆ ತೀವ್ರ ಹಿನ್ನಡೆಯಾಗಿದೆ. ಹಮಾಲಿ ಕಾರ್ಮಿಕರು ನಡೆಸುವ ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುವ ವೇಳೆಗೆ ಅಂಥ ಅಧಿಕಾರಿಯ ಬದಲಾವಣೆಯಾಗುತ್ತಿರುವುದು ಸಮಸ್ಯೆಗೆ ಪರಿಹಾರ ಅಸಾಧ್ಯ ಎಂಬಂಥ ಪರಿಸ್ಥಿತಿ ನಿರ್ಮಿಸಿದೆ ಎಂದು ದೂರಿದರು.
ಹಮಾಲಿ ಕಾರ್ಮಿಕರಿಗೆ ವಸತಿ ಸಮಸ್ಯೆ ಅತೀಯಾಗಿ ಕಾಡುತ್ತಿದೆ. ಕಾರ್ಮಿಕರು ತಮ್ಮ ದುಡಿಮೆಯ ಶೇ.40ರಷ್ಟು ಭಾಗವನ್ನು ವಸತಿಗೆ ವೆಚ್ಚ ಮಾಡುವಂಥ ಸ್ಥಿತಿಯಿದೆ. ಕಾರಣ ಸರ್ಕಾರ ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.ಶೋಷಣೆ ನಿರಂತರ: ಎಪಿಎಂಸಿಗಳಲ್ಲಿ ಹಮಾಲಿ ಕಾರ್ಮಿಕರು ಯಾವುದೇ ರೀತಿಯ ಭದ್ರತೆಯಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಕಲ್ಯಾಣ ನಿಧಿ ಸ್ಥಾಪಿಸಬೇಕು. ಎಪಿಎಂಸಿ ಆದಾಯದ ಶೇ.10ರಷ್ಟು ಹಣವನ್ನು ನಿಧಿಗೆ ಮೀಸಲಿರಿಸಬೇಕು. ವಿವಿಧೆಡೆಯ ಉದ್ಯಮಗಳಲ್ಲಿ ಕಾರ್ಮಿಕರ ಕಾನೂನು ಪಾಲನೆಯಾಗುತ್ತಿಲ್ಲ. ಶೋಷಣೆ ನಿರಂತರವಾಗಿ ಸಾಗಿದೆ ಎಂದು ಆರೋಪಿಸಿದ ಅವರು, ಕಾನೂನು ಸಮರ್ಪಕ ಪಾಲನೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕಳೆದ ಅವಧಿಯಲ್ಲಿ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಿ ರು. 20ಕೋಟಿ ಒದಗಿಸಿತ್ತು. ಆದರೆ ಆ ಮೊತ್ತ ಮಂಡಳಿಯ ಅಧಿಕಾರಿಗಳ ದುಂದುವೆಚ್ಚಕ್ಕೆ ಬಳಕೆಯಾಯಿತೇ ವಿನಾ ಹಮಾಲಿ ಕಾರ್ಮಿಕರ ಹಿತರಕ್ಷಣೆಗಲ್ಲ. ಹಮಾಲಿ ಕಾರ್ಮಿಕರಿಗೆ ವಯಸ್ಸಾದ ನಂತರದಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ಹೇಳಿದರು. ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.18ರಂದು ವಿಧಾನಸೌಧ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಹಮಾಲಿ ಕಾರ್ಮಿಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ವೀರಭದ್ರ, ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

