ಉಪನ್ಯಾಸಕ, ಮುಖ್ಯಗುರು ಬಡ್ತಿ ವಿಳಂಬ: ಖಂಡನೆ
ರಾಯಚೂರು: ಉಪನ್ಯಾಸಕರ ಮತ್ತು ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ರಾಜಶೇಖರ ದಿನ್ನಿ ಖಂಡನೆ ವ್ಯಕ್ತಪಡಿಸಿದ್ದಾರೆ. ನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪನ್ಯಾಸಕ ಮತ್ತು ಮುಖ್ಯೋಪಾಧ್ಯಾಯರ ಬಡ್ತಿಗೆ ಒತ್ತಾಯಿಸಿ ರಾಜ್ಯ ಆಯುಕ್ತರು ಮತ್ತು ವಿಭಾಗೀಯ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಶೈಕ್ಷಣಿಕ ಸಮಾವೇಶವನ್ನು ಮಾನವಿ ಪಟ್ಟಣದಲ್ಲಿ ಸೆಪ್ಟಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕು ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಭಾಗವಹಿಸಿದ್ದರು.
ಮಕ್ಕಳ ಕಾವಲು ಸಮಿತಿ ರಚನೆ
ದೇವದುರ್ಗ: ಗ್ರಾಮಾಂತರ ಪ್ರದೇಶಗಳಲ್ಲಿರುವ ಮಕ್ಕಳ ಸಂರಕ್ಷಣೆ ಮಕ್ಕಳ ಕಾವಲು ಸಮಿತಿ ಸದಸ್ಯರ ಬಹುದೊಡ್ಡ ಜವಾಬ್ದಾರಿಯಾಗಿದೆಂದು ಡಾನ್ ಬೋಸ್ಕೋ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕ ಫಾ. ಜೇಮ್ಸ್ ಪೌಲ್ ತಿಳಿಸಿದ್ದಾರೆ. ಈಚೇಗೆ ಕರಡಿಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ಕಾವಲು ಸಮಿತಿ ರಚಿಸಿದ ವೇಳೆ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿಯನ್ನು ತಡೆಗಟ್ಟಲು ಮತ್ತು ಮಕ್ಕಳಿಗೆ ರಕ್ಷಣೆ ನೀಡುವ ಈ ಸಮಿತಿ ಕೆಲಸ ಮಾಡಬೇಕೆಂದು ಅವರು ಮನವಿ ಮಾಡಿದರು. ಮಕ್ಕಳ ಕಾವಲು ಸಮಿತಿ ರಚಿಸಲಾಯಿತು.
ಬಾಲ್ಯ ವಿವಾಹ ಪದ್ಧತಿ ತಡೆಗೆ ಜಾಥಾ
ದೇವದುರ್ಗ: ಅನಕ್ಷರತೆಯಿಂದ ಮೂಢ ನಂಬಿಕೆಗಳಿಗೆ ಬಲಿಯಾಗಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡದೇ ಚಿಕ್ಕ ಮಕ್ಕಳನ್ನು ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ದೂರವಿಡಲು ಇಂತಹ ಜಾಥಾಗಳು ಸಹಕಾರಿ ಎಂದು ಹೆಗ್ಗಡದಿನ್ನಿ ಗ್ರಾಮದ ಮುಖಂಡ ಶಿವಕುಮಾರ ಹೇಳಿದರು. ತಾಲೂಕಿನ ನಾಗಡದಿನ್ನಿ ಗ್ರಾಪಂ ವ್ಯಾಪ್ತಿಯ ಹೆಗ್ಗಡದಿನ್ನಿ ಗ್ರಾಮದಲ್ಲಿ ಜಿಪಂ, ತಾಪಂ ಜನ ಸಮೂಹ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಮುದಾಯಕ್ಕೆ ಅರಿವು ಮೂಡಿಸುವ ಕಲಾ ಜಾಥಾದಲ್ಲಿ ಮಾತನಾಡಿ, ಸರ್ಕಾರದ ಪ್ರತಿಯೊಂದು ಯೋಜನೆಗಳು ಪಡೆಯಬೇಕಾದರೆ ಅಕ್ಷರ ಜ್ಞಾನ ಹೊಂದಬೇಕು. ಇಂತಹ ಜಾಥಾಗಳಿಂದ ಜನಸಮೂಹಕ್ಕೆ ಅರಿವು ಮೂಡಲು ಅನುಕೂಲ ಎಂದರು. ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯ, ಬಾಲ್ಯ ವಿವಾಹ, ಬಾಲ ಕಾರ್ಮಿಕ, ಭೂ ಬಾಡಿಗೆ ಪಾವತಿ ಬಗ್ಗೆ ಜಾಥಾದಿಂದ ಜಾಗೃತಿ ಕಾರ್ಯಕ್ರಮ ನಡೆಯಿತು. ತಂಡದ ನರಸಪ್ಪ, ಶಿವು ಪಲಕನ ಮರಡಿ, ಕಾಶಿನಾಥ ಕೊಪ್ಪದ, ಗೌರಮ್ಮ, ರೇಣುಕಾ, ಗ್ರಾಮದ ಸಿದ್ರಾಮಪ್ಪ ಸಾಹುಕಾರ, ಯಮನೂರಪ್ಪ, ಭೀಮನಗೌಡ, ತಿಪ್ಪನಗೌಡ, ಆದೆಪ್ಪ ಚಲುವಾದಿ, ಚೆನ್ನಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

