ರಾಯಚೂರು

ಎರಡು ಕೋಮಿನ ಮಧ್ಯೆ ಘರ್ಷಣೆ: ಹತ್ತು ಜನರಿಗೆ ಗಾಯ

Published On :

ಸಿಂಧನೂರು: ಮಹಿಳೆಗೆ ಸಂಬಂಧಿಸಿದಂತೆ ಎರಡು ಕೋಮಿನ ನಡುವೆ ಘರ್ಷಣೆ ನಡೆದು ಒಂದು ಕೋಮಿನ ಜನರ ಮೇಲೆ ಹಲ್ಲೆ ನಡೆದು 10 ಜನ ಗಾಯಗೊಂಡ ಘಟನೆ ಸೋಮವಾರ ತಾಲೂಕಿನ ಚಿಕ್ಕಕಡಬೂರ ಗ್ರಾಮದಲ್ಲಿ ನಡೆದಿದೆ.
ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಹರಿಜನ ಜನಾಂಗದವರು, ಕುರುಬ ಜನಾಂಗದವರ ವಿರುದ್ಧ ಬಳಗಾನೂರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರು ನೀಡಿದ ಕಾರಣ ಹರಿಜನ ಕುಟುಂಬದ ಮನೆಗಳ ಮೇಲೆ ಕುರುಬ ಜನಾಂಗದವರ ಗುಂಪು ದಾಳಿ ಮಾಡಿ ಮನೆಯಲ್ಲಿದ್ದ ಮಹಿಳೆಯರು ಮಕ್ಕಳು ಎನ್ನದೆ ಕಟ್ಟಿಗೆ, ಕೊಡಲಿ, ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಜೀವ ಬೆದರಿಕೆ ಹಾಕುವುದರ ಜೊತೆಗೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಬಳಗಾನೂರ ಪೊಲೀಸ್ ಠಾಣೆಯಲ್ಲಿ 74 ಜನರ ವಿರುದ್ಧ ದೂರು ದಾಖಲಾಗಿದೆ.
ಘಟನೆಯಲ್ಲಿ ವೆಂಕಟೇಶ, ಬಸ್ಸಪ್ಪ, ಬಸ್ಸಮ್ಮ, ದುರುಗಪ್ಪ ಸೇರಿದಂತೆ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಎರಡು ಕೋಮುಗಳ ಮಧ್ಯೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪ್ರಕ್ಷುಬ್ಬ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಬಿಡಾರ ಹೂಡಿದ್ದಾರೆ. ದೂರು-ಪ್ರತಿದೂರುಗಳು ಬಳಗಾನೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ ಎಂದು ಸಿಪಿಐ ಶೇಖರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.