ರಾಯಚೂರು

ಸಮಾಜ ಪರಿವರ್ತನೆಗೆ ಯುವಪಡೆ ಅಗತ್ಯ: ಸೂಲಿಬೆಲೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಜು.17
ಸಮಾಜದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ದೇಶದ ಯುವಕರು ಪಣತೊಡಬೇಕೆಂದು ಲೇಖಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು.
ಮಾನವಿ ಪಟ್ಟಣದ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜಯಂತ್ಯುತ್ಸವ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿ, ದೇಶದ ಗೌರವ, ಘನತೆ ಎತ್ತಿ ಹಿಡಿದ ವಿವೇಕಾನಂದರ ನಿರೀಕ್ಷೆಯಂತೆ ಯುವಕರು ದೇಶವನ್ನು ಬಲಿಷ್ಠ ರಾಷ್ಟ್ರವಾಗಿ ಕಟ್ಟುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.
ಸ್ವಾಮಿ ವಿವೇಕಾನಂದರ ಜಯಂತಿಯನ್ನು ಜಗತ್ತಿನ 120 ದೇಶಗಳಲ್ಲಿ ಆಚರಿಸಲಾಗುತ್ತಿದೆ. ವಿದೇಶಿಯರೂ   ವಿವೇಕಾನಂದರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಆದರೆ, ಭಾರತೀಯರಿಗೆ ವಿವೇಕಾನಂದರ ಆದರ್ಶ, ತತ್ವಗಳ ಬಗ್ಗೆ ಅರಿಯಲು ಆಸಕ್ತಿಯಿಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಕಲ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ವಹಿಸಿದ್ದರು. ರಾಮಕೃಷ್ಣ ಆಶ್ರಮದ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್ ವಹಿಸಿ ಮಾತನಾಡಿದರು. ರಥಯಾತ್ರೆ ಸಮಿತಿ ಅಧ್ಯಕ್ಷ ಬಿ.ವಿ. ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.
ತಹಸೀಲ್ದಾರ್ ಪುಟ್ಟನರಸಯ್ಯ, ಸಿಪಿಐ ಶ್ರೀಧರದೊಡ್ಡಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ, ಉಮೇಶ ಸಜ್ಜನ್ ಇದ್ದರು.
ರಥಯಾತ್ರೆ: ಇದಕ್ಕೂ ಪೂರ್ವದಲ್ಲಿ ವಿವೇಕಾನಂದರ 150ನೇ ಜಯಂತ್ಯುತ್ಸವ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿತ್ತು. ರಥಯಾತ್ರೆಗೆ ಪಿಎಸ್‌ಐ ದೀಪಕ್ ಭೂಸರೆಡ್ಡಿ ಚಾಲನೆ ನೀಡಿದರು. ಪಟ್ಟಣದ ವಾಲ್ಮೀಕಿ ವೃತ್ತದಿಂದ ಬಸವ ವೃತ್ತದ ಮೂಲಕ ಕಲ್ಮಠ ಗುರುಭವನದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು. ರಥಯಾತ್ರೆಯಲ್ಲಿ ಶಾಲಾ ಮಕ್ಕಳು ಸ್ವಾಮಿ ವಿವೇಕಾನಂದರ ವೇಷ-ಭೂಷಣಗಳನ್ನು ತೊಟ್ಟು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.