ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.18
ನಗರದ ಸರ್ವೋದಯ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಬಡವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ವಿತರಿಸುವ ಕಾರ್ಯಕ್ರಮ ಜರುಗಿತು.
ಸಂಘದ ಸದಸ್ಯ ಪ್ರೇವ್ಜು ಪಟೇಲ್ ಅವರು ಬೆಂಗಳೂರಿನ ಇನ್ಫೋಸಿಸ್ ಲಿಮಿಟೆಡ್ ಕಂಪನಿ ವತಿಯಿಂದ ಸಮರ್ಪಣಾ ಕಾರ್ಯಕ್ರಮದಡಿ ಬಡವಿದ್ಯಾರ್ಥಿಗಳಿಗೆ ಕೊಡವ 3250 ನೋಟ್ಬುಕ್ಗಳನ್ನು ತಂದಿದ್ದರು. ಅದನ್ನು ಶಾಲೆಯ ವಿವೇಕಾನಂದ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಸ್.ವಿ. ಪಾಟೀಲ್ ವಹಿಸಿದ್ದರು.
ಸಂಸ್ಥೆಯ ಸದಸ್ಯ ಎನ್. ಶಿವನಾಗಪ್ಪ ಮಾತನಾಡಿ, ಪ್ರೇವ್ಜು ಪಟೇಲ್ ಬೆಂಗಳೂರಿನ ಇನ್ಫೋಸಿಸ್ ಕಂಪನಿಯಿಂದ ಕಳುಹಿಸಿರುವ ನೋಟ್ಬುಕ್ಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನೊಬ್ಬರಿಗೆ ಮಾರುವುದಾಗಲಿ, ಕೊಡುವುದಾಗಲಿ ಮಾಡದೆ ತಮ್ಮ ವಿದ್ಯಾರ್ಜನೆಗೆ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಪ್ರೊ. ಶಾಶ್ವತಸ್ವಾಮಿ ಮುಕ್ಕುಂದಿಮಠ, ಅಮರಪ್ಪ ಮೈಲಾರ, ವೀರೇಂದ್ರಪ್ರಸಾದ ಮೇರನಾಳ, ವೀರಭದ್ರಪ್ಪ ಹಟ್ಟಿ, ಮುಖ್ಯಗುರು ಬಿ. ಚಿದಾನಂದಪ್ಪ ಪಾಲ್ಗೊಂಡಿದ್ದರು. ಮಲ್ಲಿಕಾರ್ಜುನ ಜಟ್ಟೆರ್ ಸ್ವಾಗತಿಸಿದರು. ತಿಮ್ಮಣ್ಣ ವಂದಿಸಿದರು. ಚಿದಾನಂದಪ್ಪ, ಶ್ರೀಧರ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.
--
ಚಂದ್ರಶೇಖರ ಬೆನ್ನೂರು ಆಯ್ಕೆ
ಸಿಂಧನೂರು: ಲಿಂಗಸ್ಗೂರು ತಾಲೂಕು ಪ್ರೆಸ್ಕ್ಲಬ್ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಉದಯವಾಣಿ ವರದಿಗಾರ ಚಂದ್ರಶೇಖರ ಬೆನ್ನೂರು ಆಯ್ಕೆಯಾಗಿದ್ದಾರೆ.
ಕಳೆದ ಏಳೆಂಟು ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರೆಸ್ಕ್ಲಬ್ ವತಿಯಿಂದ ನೀಡಲಾಗುವ ಸನ್ಮಾನಕ್ಕೆ ಭಾಜನರಾಗಿದ್ದಾರೆ.
ಸನ್ಮಾನ: ಜು.20ರ ಶನಿವಾರದಂದು ಲಿಂಗಸ್ಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕಿನ ಚಂದ್ರಶೇಖರ ಬೆನ್ನೂರು ಸೇರಿದಂತೆ ಜಿಲ್ಲೆಯ ವಿವಿಧ ಕನ್ನಡ ದಿನಪತ್ರಿಕೆಗಳ ಐದು ಜನ ವರದಿಗಾರರರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರೆಸ್ಕ್ಲಬ್ ಅಧ್ಯಕ್ಷ ಶಿವರಾಜ ಕೆಂಬಾವಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

