ರಾಯಚೂರು

ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ

Published On :

ರಾಯಚೂರು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಎಂಬಿಬಿಎಸ್ ಅರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ತಮ್ಮ ಸ್ವವಿವರ ದಾಖಲಿಸಿ, ಶೈಕ್ಷಣಿಕ, ಇತರೆ ಮೂಲ ದಾಖಲೆಗಳ ವಿವರಗಳ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಸಂದರ್ಶನಕ್ಕೆ ಮೂಲ ದಾಖಲೆ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ನೇಮಕಾತಿ ಮೆರಿಟ್ ಕಂ- ರೋಸ್ಟರ್ ಪ್ರಕಾರ ಮಾಡಲಾಗುವುದು. ಈಗಾಗಲೇ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. ಸಂದರ್ಶನಕ್ಕೆ ಹಾಜರಾಗುವ ಅವಶ್ಯಕತೆಯಿಲ್ಲ. ಒಟ್ಟು 11 ಹುದ್ದೆಗಳಿಗೆ ನೇಮಕಾತಿಗಾಗಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜು.29 ಕಡೆಯ ದಿನವಾಗಿದೆ.
ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರ ಒತ್ತಾಯ
ಮಸ್ಕಿ: ಇಲ್ಲಿಗೆ ಸಮೀಪದ ಮುದಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕನ್ನು ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮದ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ಕಾರ್ಯನಿರ್ವಹಿಸುತ್ತಿದ್ದು, ನೆಪಮಾತ್ರಕ್ಕೆ ಒಬ್ಬ ಮುಖ್ಯಗುರುಗಳಿದ್ದಾರೆ. ಅವರೇ ಶಾಲೆಯನ್ನು ನಿರ್ವಹಿಸುತ್ತಿದ್ದು, ಶಾಲೆಯ ಇನ್ನಿತರ ಕೆಲಸ ಕಾರ್ಯಗಳಿಗೂ ತೆರಳುವಂತಾಗಿದೆ ಎಂದು ದೂರಿದ್ದಾರೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಕಾರಣ ಕೂಡಲೇ ಗ್ರಾಮದ ಶಾಲೆಗೆ ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸುವಂತೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ, ಬೆಂಜಾಮಿನ್, ಕರಿಯಪ್ಪ, ಬಾಲಸ್ವಾಮಿ, ಸುಭಾಸ್, ಆದಪ್ಪ, ಮರಿಯಪ್ಪ, ತಿಮ್ಮಪ್ಪ ಸೇರಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ಯಾಸ್ ಸಂಪರ್ಕ; ಅರ್ಜಿ ಆಹ್ವಾನ
ರಾಯಚೂರು: ಮಾನವಿ ಪಟ್ಟಣದ ಎಲ್ಲ ವಾರ್ಡಿನ ಎಸ್ಸಿ- ಎಸ್ಟಿ ಜನಾಂಗದವರಿಗೆ ಪ್ರಸಕ್ತ ಸಾಲಿಗೆ ಶೇ.22.75 ಯೋಜನೆಡಿ ಅಡುಗೆ ಅನಿಲ ಸಂಪರ್ಕ ಪಡೆಯಲು ಅರ್ಹರಿಂದ ಅರ್ಜಿ ಕರೆಯಲಾಗಿದೆ. ಅಡುಗೆ ಅನಿಲ ಸಂಪರ್ಕ ಹೊಂದಿರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಗ್ಯಾಸ್ ಸಂಪರ್ಕ ಒದಗಿಸುವ ಯೋಜನೆ ಇದಾಗಿದೆ. ಆಸಕ್ತರು ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಮಾನವಿ ಪುರಸಭೆಗೆ ಆ.15ರೊಳಗೆ ಸಲ್ಲಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.