ರಾಯಚೂರು

ಮನೆಯಲ್ಲಿ ಮಹಾಮನೆ 716ನೇ ಕಾರ್ಯಕ್ರಮ

Published On :

ಸಿಂಧನೂರು: ಬಸವಕೇಂದ್ರ ಹಾಗೂ ಯುವಬಸವ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ, 716ನೇ ಮನೆಯಲ್ಲಿ ಮಹಾಮನೆ ಹಾಗೂ ಹಡಪದ ಅಪ್ಪಣ್ಣ ಸಮಾಜದ ಯುವ ಘಟಕದ ಉದ್ಘಾಟನಾ ಸಮಾರಂಭವನ್ನು ಜು.20 ರಂದು ಬಸವ ಪ್ರಸಾದ ನಿಲಯದಲ್ಲಿ ಸಂಜೆ 5ಕ್ಕೆ ಹಮ್ಮಿಕೊಳ್ಳಲಾಗಿದೆ.
ಸಮಾರಂಭವನ್ನು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಶಂಕರಪ್ಪ ಕರಡೋಣಿ ವಹಿಸುವರು. ಬಸವಕೇಂದ್ರದ ಧರ್ಮದರ್ಶಿ ವೀರಭದ್ರಪ್ಪ ಕುರುಕುಂದಿ ಕಟ್ಟ ಬಯಸಿದ ಸಮಾಜದ ಕುರಿತು ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ, ಸಿಪಿಐ ಎಸ್. ಶೇಖರಪ್ಪ, ಹಡಪದ ಸಮಾಜದ ಜಿಲ್ಲಾಧ್ಯಕ್ಷ ಅಮರಪ್ಪ, ಬಸವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ. ಗೋವಿಂದರಡ್ಡಿ, ಎಸ್.ಎ.ಎಸ್. ಶಾಮಣ್ಣ ನಾಯಕ, ಮಲ್ಲಿಕಾರ್ಜುನ ಸಾಹುಕಾರ ಹುಲ್ಲೂರು, ಬಸವಕೇಂದ್ರದ ಅಧ್ಯಕ್ಷ ಗುಂಡಪ್ಪ ಬಳಿಗಾರ, ಯುವ ಬಸವಕೇಂದ್ರದ ಅಧ್ಯಕ್ಷ ಶೇಖರ ಯರದಿಹಾಳ, ಹಡಪದ ಅಪ್ಪಣ್ಣ ವಿವಿದೊದ್ಧೇಶ ಸಹಕಾರಿ ಸಂಘದ  ಅಧ್ಯಕ್ಷ ಜಂಬಣ್ಣ ತಡಕಲ್ ಪಾಲ್ಗೊಳ್ಳುವರು.
ಇದೇ ಸಂದರ್ಭದಲ್ಲಿ ಬಸವ ಚಾರಿಟೇಬಲ್ ಟ್ರಸ್‌ನ ಆರ್.ಎಸ್. ಪಾಟೀಲರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕೆಂದು ಬಸವ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿಜಗುಣ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.