ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು: ಸಿಂಧನೂರು ತಾಲೂಕಿನ ಧಡೇಸೂಗೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿಗೆ ರೈತರಿಗೆ ಮತ್ತು ರೈತ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗುತ್ತಿದ್ದು, ಒಟ್ಟು 17 ರೀತಿ ತರಬೇತಿ ನೀಡಲಾಗುತ್ತದೆ ಎಂದು ಕೃಷಿ ಕೇಂದ್ರದ ಪ್ರಕಟಣೆ ತಿಳಿಸಿದೆ. ಮೂರು ಹಾಗೂ ಐದು ದಿನಗಳ ತರಬೇತಿಗಳು,ಎರಡು ವಿಶೇಷ ತರಬೇತಿಗಳನ್ನು ಏರ್ಪಡಿಸುವ ಗುರಿಯಿದ್ದು,ತರಬೇತಿಯ ಅವಧಿಯಲ್ಲಿ ವಿವಿಧ ಕೃಷಿ ವಿಜ್ಞಾನಿಗಳಿಂದ ಕೃಷಿ ತಾಂತ್ರಿಕ ಮಾಹಿತಿ ಹಾಗೂ ಪ್ರಗತಿಪರ ರೈತರ ಜಮೀನುಗಳಿಗೆ ಸಂದರ್ಶನ, ಕೃಷಿ ತೋಟಗಾರಿಕೆ, ಹೈನುಗಾರಿಕೆ, ಸಮಗ್ರ ಕೃಷಿ ಪದ್ಧತಿ, ಗೊಬ್ಬರಗಳ ಬಳಕೆ ಮತ್ತು ಸಾವಯುವ ಕೃಷಿಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದೆ. ತರಬೇತಿ ಅವಧಿಯಲ್ಲಿ ರೈತರಿಗೆ ವಸತಿ, ಉಪಹಾರ, ಊಟ ಹಾಗೂ ರೈತರು ತಮ್ಮ ಸ್ವಸ್ಥಳದಿಂದ ತರಬೇತಿ ಕೇಂದ್ರಕ್ಕೆ ಬಂದು ಹೋಗುವ ವೆಚ್ಚ ನೀಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಕೃಷಿ ರೈತ ಸಂಪರ್ಕ ಕೇಂದ್ರಗಳಲ್ಲಿ ವಿಚಾರಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

