'ನೂತನ ಕಟ್ಟಡ ತಂತ್ರಜ್ಞಾನ ಅಳವಡಿಸಿಕೊಳ್ಳಿ'
ಸಿಂಧನೂರು: ಇತ್ತೀಚಿನ ನೂತನ ತಂತ್ರಜ್ಞಾನಗಳನ್ನು ಬಳಸಿ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯವರು ಕಟ್ಟಡಗಳ ಹೊಸ ಹೊಸ ಸಾಮಗ್ರಿಗಳನ್ನು ಮಾರುಕಟ್ಟೆಗೆ ತಂದಿದ್ದಾರೆ. ಅದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ನೀರಾವರಿ ಇಲಾಖೆಯ ಕಾರ್ಯನಿರ್ವಹಕ ಎಂಜಿನಿಯರ್ ಎಂ.ಆರ್. ಮುಲ್ಲಾ ಕರೆ ನೀಡಿದರು.
ನಗರದ ಜೈನ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಲ್ಡ್ ಟೆಕ್- 2013ರ ಅಂಗವಾಗಿ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಟ್ಚಡ ಸಾಮಗ್ರಿಗಳ ಮತ್ತು ಗೃಹ ಅಲಂಕಾರ ವಸ್ತುಗಳ ಪ್ರದರ್ಶನವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಉತ್ಪಾದಕರಿಂದ ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮನೆ ಒಳಗಡೆ, ಹೊರಗಡೆ ಅಂದವಾಗಿ ಕಾಣಬೇಕು, ಆಧುನಿಕ ತಂತ್ರಜ್ಞಾನದ ಬಳಕೆ, ಕಟ್ಟಡ ಹಾಗೂ ಗೃಹಾಲಂಕಾರ ಸಾಮಗ್ರಿ, ಸಿಮೆಂಟ್, ಗ್ರಾನೈಟ್, ಎಲೆಕ್ಟ್ರಿಕಲ್, ಬಾತ್ ಫಿಟ್ಟಿಂಗ್ಸ್, ಕಿಟಕಿ, ಸೋಲಾರ್, ಪೀಠೋಪಕರಣಗಳು, ಮಾಡ್ಯುಲರ್, ಅಡುಗೆಮನೆ ಸೇರಿದಂತೆ ಹತ್ತುಹಲವು ವಿಷಯಗಳ ವಸ್ತು ಪ್ರದರ್ಶನ ನಡೆಯಲಿದೆ. ಜೊತೆಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಪಂ ಎ.ಇ.ಇ. ಬಿ.ಆರ್. ಗೌಡೂರು, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಮಾರ್ಕೆಟಿಂಗ್ ಮ್ಯಾನೇಜರ್ ವಿ.ಎಸ್. ಪಾಟೀಲ್, ಅಭಿಯಂತರರಾದ ತಿಮ್ಮಣ್ಣ, ವೆಂಕಟೇಶ ಗಲಗ, ಕಾಶಿರಾಯ, ವಿ.ಸಿ. ಪಾಟೀಲ್, ದೊಡ್ಡಪ್ಪ ತಿಡಿಗೋಳ, ಅಲಬನೂರು ಬಸವರಾಜ, ಸರ್ವೋತ್ತಮರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
ಯು.ಎಸ್. ಕಮ್ಯೂನಿಕೇಷನ್ಸ್ ಉಮಾಪತಿ ಪ್ರದರ್ಶನದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ತಾಂತ್ರಿಕ ಅಧಿಕಾರಿ ಎಚ್. ನಾಗರಾಜ, ಅಶೋಕರೆಡ್ಡಿ, ಕುಮಾರಸ್ವಾಮಿ ಮತ್ತಿತರ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

