ರಾಯಚೂರು

ಅಹಿಂದ ಸಂಘಟನೆ ಬಲವರ್ಧನೆಗೆ ನಿರ್ಧಾರ

Published On :

ರಾಯಚೂರು: ಜಿಲ್ಲೆಯಲ್ಲಿ ಅಹಿಂದ ಸಂಘಟನೆಯನ್ನು ಬೇರು ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಹಾಗೂ ಹಿಂದುಳಿದ ವರ್ಗಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹೋಬಳಿ ಮಟ್ಟದಲ್ಲಿ ಸಂಘಟನೆಯ ಘಟಕಗಳನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಜಿಲ್ಲಾಧ್ಯಕ್ಷ ರಾಮಚಂದ್ರರೆಡ್ಡಿ ನೇತೃತ್ವದಲ್ಲಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಈ ವೇಳೆ ರಾಯಚೂರು ತಾಲೂಕು ಮತ್ತು ನಗರ ಘಟಕಗಳನ್ನು ರಚಿಸಲಾಯಿತು. ಜಿಲ್ಲೆಯ ಎಲ್ಲೆಡೆ ಅಹಿಂದ ಸಂಘಟನೆಯ ತಾಲೂಕು ಸಮಿತಿ, ಹೋಬಳಿ ಸಮಿತಿಗಳ ನೇಮಕದ ನಂತರದಲ್ಲಿ ಸಂಘಟನೆಯ ವತಿಯಿಂದ ರಾಜ್ಯದ ಸಚಿವರಾದ ಸತೀಶ ಜಾರಕಿಹೊಳಿ, ಮಹಾದೇವಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ನಗರಕ್ಕೆ ಕರೆಸಿ ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಸಂಘಟನೆ ಪ್ರಮುಖರಾದ ಆರ್.ರಾಮು, ವೈ.ಬಿ. ಪಾಟೀಲ್, ಕಡಗೋಲು ಶರಣಪ್ಪ, ಪೂಜಾರಿ ಶರಣಪ್ಪ, ಅಮೀನುದ್ದೀನ್, ನರಸಿಂಹಲು, ಸತ್ಯನಾರಾಯಣ ಸೇರಿ ಅನೇಕರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.