ಇಂದು ಚುನಾವಣೆ
ರಾಯಚೂರು: ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯು ಜು.22ರಂದು ನಡೆಯಲಿದ್ದು, ಮತದಾನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹುಸೇನಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಮತದಾನವು ನಗರದ ಹಾಷ್ಮಿಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪ್ರಾಥಮಿಕ ಶಾಲಾ ಕ್ಷೇತ್ರಕ್ಕೆ ಎಂಟು ಜನ ಅಭ್ಯರ್ಥಿಗಳು ಹಾಗೂ ಪ್ರೌಢಶಾಲಾ ಕ್ಷೇತ್ರದಿಂದ ಮೂವರು ಕಣದಲ್ಲಿದ್ದು, ಈಗಾಗಲೇ 49ಜನ ಅವಿರೋಧ ಆಯ್ಕೆಯಾಗಿದೆ ಎಂದು ತಿಳಿಸಿದ್ದಾರೆ.
ಜು.22ರ ಸಂಜೆ 5.30ರ ನಂತರದಲ್ಲಿ ಮತಗಳ ಎಣಿಕೆ ಕಾರ್ಯ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣೆ ಮತದಾನ ಕಾರ್ಯ ಮುಕ್ತ ಹಾಗೂ ಸುಗಮವಾಗಿ ನಡೆಯುವಂತೆ ಈಗಾಗಲೇ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ಹಿನ್ನೆಲೆ ಸೂಕ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಸ್ಕೌಟ್ಸ್- ಗೈಡ್ಸ್ ಸಮಾವೇಶ ಯಶಸ್ವಿ
ರಾಯಚೂರು: ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ದೇಶಾಭಿಮಾನ ಮೂಡಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಕೆ. ತಿಮ್ಮಯ್ಯ ಕರೆ ನೀಡಿದರು.
ನಗರದಲ್ಲಿ ಇತ್ತೀಚೆಗೆ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಚಿಕ್ಕವಯಸ್ಸಿನಲ್ಲಿಯೇ ಸಮಯಪ್ರಜ್ಞೆ ಮೂಡಿಸುವ ಮೂಲಕ ಪ್ರಗತಿಗೆ ಶ್ರಮಿಸುವಂತೆ ಪಾಲಕರಿಗೆ ಕರೆ ನೀಡಿದರು. ಆಯುಕ್ತ ಶೇಷಗಿರಿರಾವ್ ಕುಲಕರ್ಣಿ, ಅಜೀಜಾ ಸುಲ್ತಾನ್ ಮಾತನಾಡಿದರು. ಅಧ್ಯಕ್ಷತೆಯನ್ನು ಗೋವಿಂದರಾಜು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಹಾಯಕ ಆಯುಕ್ತೆ ಆಲಿಯಾ ಖಾನಂ, ಖಜಾಂಚಿ ಕೃಷ್ಣಾ, ಹನುಮಂತಪ್ಪ ಮತ್ತಿತರರಿದ್ದರು.
ತಾಲೂಕಿನ ವಿವಿಧೆಡೆಯ ಶಾಲೆಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

