ಮೂಲ ಸೌಲಭ್ಯ ಕೊರತೆ: ದೂರು
ರಾಯಚೂರು: ತಾಲೂಕಿನ ದೇವಸೂಗೂರು ಗ್ರಾಮದ ಗ್ರಾಪಂ ವ್ಯಾಪ್ತಿಯ 6ನೇ ವಾರ್ಡ್ ಲೇಬರ್ ಕಾಲನಿಯಲ್ಲಿ ಮೂಲಸೌಲಭ್ಯ ಕಲ್ಪಿಸುವಂತೆ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಆಗ್ರಹಿಸಿದೆ.
ಈ ಕುರಿತು ಜಿಪಂ ಸಿಇಒ ಗೆ ಈಚೆಗೆ ಮನವಿ ಸಲ್ಲಿಸಿ, ದೇವಸೂಗೂರು ಗ್ರಾಮದ 6ನೇ ವಾರ್ಡು ಲೇಬರ್ ಕಾಲನಿಯಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲ ಸೌಲಭ್ಯಗಳಿಲ್ಲದೇ ಬಡಕಾರ್ಮಿಕರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಬೀದಿ ದೀಪದ ಸೌಲಭ್ಯಗಳಿಲ್ಲ ಎಂದು ಆರೋಪಿಸಿದರು.
ಈ ಬಗ್ಗೆ ಅನೇಕ ಸಂದರ್ಭದಲ್ಲಿ ಗ್ರಾಪಂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ವಾರ್ಡಿನ ಸದಸ್ಯರು ಜನರ ಮನವಿಗೆ ನಿರ್ಲಕ್ಷ್ಯದಿಂದ ಉತ್ತರಿಸುತ್ತಿದ್ದು, ಗ್ರಾಪಂ ಅಧ್ಯಕ್ಷರೇ ಸಮಸ್ಯೆ ಪರಿಹರಿಸಬೇಕೆಂದು ತಿಳಿಸಿದ್ದಾರೆ. ಇದರಿಂದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆಂದು ಆರೋಪಿಸಿದರು.
ಗ್ರಾಪಂ ನಿರ್ಲಕ್ಷ್ಯದಿಂದ ಲೇಬರ್ ಕಾಲನಿ ನಿವಾಸಿ ಬಡವರ್ಗದವರು ತೊಂದರೆಗೆ ಸಿಲುಕುವಂತಾಗಿದೆ. ಕಾರಣ ಕೂಡಲೇ ಜಿಪಂ ಈ ನಿಟ್ಟಿನಲ್ಲಿ ಗಮನಹರಿಸಿ ಗ್ರಾಮದ ನಿವಾಸಿಗಳ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಕೋಶಾಧ್ಯಕ್ಷ ಹುಲಿಗೆಪ್ಪ ಹುಲಿ, ತಾಲೂಕು ಕೋಶಾಧ್ಯಕ್ಷ ಮಂಜುನಾಥ ಮತ್ತಿತರರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

