ರಾಯಚೂರು

ಎಂಪಿಸಿಎಲ್ ಪುನಾರಂಭ: ಡಿಸಿ ನೇತೃತ್ವದಲ್ಲಿ ಸಭೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಜು.23
ಕಾನೂನು ಬಾಹಿರವಾಗಿ ಮುಚ್ಚಿರುವ ರಾಯಚೂರಿನ ಮೈಸೂರು ಪೆಟ್ರೋ ಕೆಮಿಕಲ್ ಕಾರ್ಖಾನೆ ಪುನಾರಂಭಕ್ಕೆ ಕಾರ್ಮಿಕರು ಪಟ್ಟು ಹಿಡಿದ ಪರಿಣಾಮ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಖಾನೆ ಆಡಳಿತ ಮಂಡಳಿ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಭೀಮಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಪಿಸಿಎಲ್ ಕಾರ್ಖಾನೆ ಕಾನೂನು ಬಾಹಿರ ಮುಚ್ಚಿರುವುದನ್ನು ವಿರೋಧಿಸಿ ಕಾರ್ಮಿಕರು ಜು. 18ರಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದರ ಹಿನ್ನೆಲೆಯಲ್ಲಿ ಜು.22ರಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್ ನೇತೃತ್ವದಲ್ಲಿ ಎಂಪಿಸಿಎಲ್ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಮಿಕ ಮುಖಂಡರ ಮಧ್ಯೆ ಮಾತುಕತೆ ನಡೆಯಿತು. ಕಾರ್ಖಾನೆ ಪುನಾರಂಭಕ್ಕೆ ಪಟ್ಟು ಹಿಡಿದ ಕಾರ್ಮಿಕ ಮುಖಂಡರು, ಆಡಳಿತ ಮಂಡಳಿ ಘೋಷಿಸಿದ ಪರಿಹಾರ ಮತ್ತು ಅವರು ಕಾರ್ಖಾನೆ ಮುಚ್ಚಿರುವ ಬಗ್ಗೆ ಸಮರ್ಥಿಸಿಕೊಂಡಿರುವುದನ್ನು ವಿರೋಧಿಸಲಾಯಿತು.
ಮುಚ್ಚಲು ಕಾರಣ: ಆಡಳಿತ ಮಂಡಳಿಯವರು ಇಂದಿನ ಪರಿಸ್ಥಿತಿಯಲ್ಲಿ ಕಾರ್ಖಾನೆ ನಡೆಸಲು ಸಾಮರ್ಥ್ಯವಿಲ್ಲದ ಕಾರಣ ಮುಚ್ಚಲಾಗಿದೆ ಎಂದು ತಿಳಿಸಿದರು.
    ಇದಕ್ಕೆ ಒಪ್ಪದ ಕಾರ್ಮಿಕ ಮುಖಂಡರು ಕಾರ್ಖಾನೆ ಪುನಾರಂಭಕ್ಕೆ ಪಟ್ಟುಹಿಡಿದಾಗ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಈ ಕುರಿತು ಪುನಃ ಆಡಳಿತ ಮಂಡಳಿ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯವರು ಮರು ನಿರ್ಧಾರದ ನಂತರ ಪುನಃ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಸೇರಿ ಅಂತಿಮ ಪರಿಹಾರ ಕಂಡುಕೊಳ್ಳುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.
ಧರಣಿ ಮುಂದುವರಿಕೆ: ಸಭೆಯ ನಂತರ ಸಿಐಟಿಯು ಕಾರ್ಯಾಲಯದಲ್ಲಿ ಸಭೆ ಸೇರಿದ ಕಾರ್ಮಿಕರು, ಮುಂದಿನ ಬೇಡಿಕೆ ಈಡೇರುವವರೆಗೆ ಕಾರ್ಖಾನೆ ಮುಂದೆ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಮುಂದುವರಿಸಲಾಗುವುದೆಂದು ತೀರ್ಮಾನಿಸಲಾಗಿದೆ ಎಂದು ಎಂಪಿಸಿಎಲ್ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.