ರಾಯಚೂರು

'ಸಮುದಾಯ ಭವನ ಶೀಘ್ರ ಪೂರ್ಣಗೊಳಿಸಿ'

Published On :

ರಾಯಚೂರು: ನಗರದ ವಾರ್ಡ್ 19ರ ಹರಿಜನವಾಡದ ಅಪೂರ್ಣಗೊಂಡ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಮಾಡಿದ ಗುತ್ತೇದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ನವರತ್ನ ಯುವಕ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಜಾತಿಯ ಶೇ. 22.75ರ ಯೋಜನೆಯಡಿ 14 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಸುಮಾರು 5 ವರ್ಷಗಳ ಹಿಂದೆ ಟೆಂಡರ್ ಕರೆಯಲಾಗಿದೆ. ನಿಗದಿತ 1 ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ನಗರಸಭೆಗೆ ಗಡುವು ನೀಡಲಾಗಿತ್ತು. ಆದರೆ 5 ವರ್ಷ ಕಳೆದರೂ ಪೂರ್ಣಗೊಳಿಸದೆ ಕಾಮಗಾರಿ ವಿಳಂಬವಾಗಿದೆ. ಇದರಿಂದ ವಾರ್ಡ್ ಜನತೆ ಸಭೆ- ಸಮಾರಂಭ ಸೇರಿದಂತೆ ಇನ್ನಿತರೆ ಕಾರ್ಯಕ್ರಮ ಹಮ್ಮಿಕೊಳ್ಳಲು ಪರದಾಡುವಂತಾಗಿದೆ. ಕಾರಣ ಕಾಮಗಾರಿ ವಿಳಂಬ ಮಾಡಿದ ಗುತ್ತೇದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಪ್ಪು ಪಟ್ಟಿಗೆ ಸೇರಿಸಿ ಅಪೂರ್ಣಗೊಂಡ ಸಮುದಾಯ ಭವನ ಕಟ್ಟಡ ಕಾಮಗಾರಿ ತಿಂಗಳಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಘದ ಅಧ್ಯಕ್ಷ ಎಸ್.ಹುಲಿಗೆಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ವೆಂಕಟೇಶ, ಗೌರವಾಧ್ಯಕ್ಷ ಆರ್.ಆಂಜನೇಯ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.