ರಾಯಚೂರು

ಅಕ್ರಮ ಪತ್ತೆ: ಅಂಗಡಿ ರದ್ದು

Published On :

ರಾಯಚೂರು: ತಾಲೂಕಿನ ಅಸ್ಕಿಹಾಳ ಗ್ರಾಮದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಮಾರಾಟ ಮಾಡುತ್ತಿದ್ದ ವಿತರಕರ ಅನುಮತಿ ರದ್ದುಗೊಳಿಸಲಾಗಿದೆ. ಈ ಬಗ್ಗೆ ದೂರುಗಳು ಬಂದ ಹಿನ್ನೆಲೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಅಸ್ಕಿಹಾಳ ಗ್ರಾಮದ ಡೀಲರ್ ಬಸವರಾಜ ಎಂಬುವವರಿಗೆ ಸೇರಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಪರೀಕ್ಷಿಸಿದ್ದು, ಈ ವೇಳೆ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿ ಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವಿತರಣೆ ಮಾಡುತ್ತಿರುವುದು ಕಂಡುಬಂದಿದೆ. ಪಡಿತರ ಚೀಟಿದಾರರನ್ನು ಅಧಿಕಾರಿಗಳು ವಿಚಾರಿಸಿದಾಗ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಿಗೆ 29 ಕೆಜಿ ಬದಲಿಗೆ 20 ಕೆಜಿ ಅಕ್ಕಿ ವಿತರಿಸಿದ್ದು, ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಯ ವಿತರಕ ಬಸವರಾಜ್ ಡೀಲರ್‌ಶಿಪ್‌ಅನ್ನು ರದ್ದುಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಉದ್ಯೋಗ ತರಬೇತಿಗೆ ಅರ್ಜಿ
ರಾಯಚೂರು: ಜಿಲ್ಲೆಯ ಅರ್ಹ ವಿಶೇಷಚೇತನರಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವ ಯೋಜನೆ ಅನುಷ್ಠಾನಕ್ಕಾಗಿ ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಅರ್ಹರು 18ರಿಂದ 45 ವರ್ಷ ವಯಸ್ಸಿನವರಾಗಿರಬೇಕು. ಯಾವುದೇ ತರಬೇತಿ ಪಡೆಯಲಿಚ್ಛಿಸುವ ವಿಶೇಷಚೇತನರಿಂದ ಅರ್ಜಿ ಆಹ್ವಾನಿಸಿದ್ದು, ನಿಗದಿತ ಅರ್ಜಿ ನಮೂನೆ ಹಾಗೂ ವಿವರಕ್ಕೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಪೂಜಿ ಪ್ರೌಢಶಾಲೆ ಹತ್ತಿರ, ಸಿಯಾತಲಾಬ್, ರಾಯಚೂರು ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ಹಾವು ಕಚ್ಚಿ ಹಸುಳೆ ಸಾವು
ರಾಯಚೂರು: ಲಿಂಗಸ್ಗೂರು ತಾಲೂಕಿನ ಮುದಗಲ್ ಪಟ್ಟಣದ ಮನೆಯೊಂದರಲ್ಲಿ ರಾತ್ರಿ ವೇಳೆ ಮಲಗಿದ್ದ ಹಸುಳೆಗೆ ಹಾವು ಕಚ್ಚಿ ಮೃತಪಟ್ಟಿದ್ದಾಳೆ. ಮೃತಳನ್ನು ಐಶ್ವರ್ಯ(5 ತಿಂಗಳು) ಎಂದು ಗುರುತಿಸಲಾಗಿದೆ. ಈಕೆಯು ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಸುನೀಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.