ನಾಳೆ ಸಿದ್ಧಾಂತ ಶಿಖಾಮಣಿ ಲೋಕಾರ್ಪಣೆ, ಪಾದಯಾತ್ರೆ
ರಾಯಚೂರು: ನಗರದ ಸೋಮವಾರಪೇಟೆ ಹಿರೇಮಠದ ವತಿಯಿಂದ ಜು. 26ರಂದು ಸಿದ್ಧಾಂತ ಶಿಖಾಮಣಿ ಪಾರಾಯಣ ಗ್ರಂಥದ ಪಲ್ಲಕ್ಕಿ ಮಹೋತ್ಸವ, ಶ್ರೀಕಾಶಿ ಜಗದ್ಗುರು ಚಂದ್ರಶೇಖರ ಶಿವಾಚಾರ್ಯರ ಪಾದಯಾತ್ರೆ ಮತ್ತು ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9ಕ್ಕೆ ಸಿದ್ಧಾಂತ ಶಿಖಾಮಣಿ ಪಾರಾಯಣ ಗ್ರಂಥದ ಪಲ್ಲಕ್ಕಿಯಲ್ಲಿ ಮೆರವಣಿಗೆ ಸೋಮವಾರಪೇಟೆಗೆ ನಡೆಸಲಾಗುತ್ತದೆ. ಉತ್ಸವದ ನೇತೃತ್ವವನ್ನು ಕಿಲ್ಲೇಬ್ರಹನ್ಮಠದ ಶಾಂತಮಲ್ಲ ಶಿವಾಚಾರ್ಯರು ವಹಿಸುವರು. ಈ ವೇಳೆ ಶ್ರೀಮಠದಲ್ಲಿ ಶ್ರೀರುದ್ರಹೋಮದ ಪೂರ್ಣಾಹುತಿ ನಡೆಯಲಿದೆ. ಬೆ.10ಕ್ಕೆ ಗ್ರಂಥ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.
ಸಮಾರಂಭದ ಸಾನ್ನಿಧ್ಯವನ್ನು ಕಾಶೀಮಠದ ಚಂದ್ರಶೇಖರ ಶಿವಾಚಾರ್ಯರು ವಹಿಸುವರು. ಅಧ್ಯಕ್ಷತೆಯನ್ನು ಬಿಚ್ಚಾಲಿ ಮಠದ ವೀರಭದ್ರ ಶಿವಾಚಾರ್ಯರು ವಹಿಸವರು. ನೇತೃತ್ವವನ್ನು ಮಾನವಿ ಕಲ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು ವಹಿಸುವರು.
ಗ್ರಂಥ ಪರಿಚಯ ಹಾಗೂ ಧರ್ಮ ಸಂದೇಶವನ್ನು ಜಾಲಹಳ್ಳಿ ಮಠದ ವಿದ್ಯಾಭಿನವ ಜಯಶಾಂತಲಿಂಗೇಶ್ವರ ಸ್ವಾಮೀಜಿ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಶಿವರಾಜ್ ಪಾಟೀಲ್ ಭಾಗವಹಿಸುವರೆಂದು ಗ್ರಂಥ ಲೋಕಾರ್ಪಣೆ ಸಮಿತಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

