ರಾಯಚೂರು

ಮನೆಗಳ ಹಂಚಿಕೆ ಅವ್ಯವಹಾರ: ಕ್ರಮಕ್ಕೆ ಆಗ್ರಹ

Published On :

ಲಿಂಗಸ್ಗೂರು: ತಾಲೂಕಿನ ಆನೆಹೊಸೂರ ಗ್ರಾಪಂ ವ್ಯಾಪ್ತಿಯ ಜಾಗಿರನಂದಿಹಾಳ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಜನರಿಗೆ ಮಂಜೂರಾದ ಆಶ್ರಯ ಮನೆಗಳನ್ನು ಬೆರೆ ಜನಾಂಗದವರಿಗೆ ನೀಡಲಾಗಿದ್ದು, ಕೂಡಲೇ ಗ್ರಾಪಂ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ತಾಪಂ ವ್ಯವಸ್ಥಾಪಕ ಮಲ್ಲಿಕಾರ್ಜುನಗೆ ಬುಧವಾರ ಮನವಿ ಸಲ್ಲಿಸಿದರು.
ಬೋಗಸ್ ಬಿಲ್: ಗ್ರಾಮದ ಪರಿಶಿಷ್ಟ ಪಂಗಡ ಫಲಾನುಭವಿ ಗದ್ದೆಮ್ಮ ಶರಣಬಸವ ಇವರಿಗೆ ಮಂಜೂರಾದ ಮನೆಯನ್ನು ಬೇರೆ ಜನಾಂಗದ ಚನ್ನಮ್ಮ ಶಿವರಾಯಪ್ಪ ಎಂಬುವರಿಗೆ ಮಂಜೂರು ಮಾಡಿದ್ದು, ಅಲ್ಲದೆ ಬೇರೆಯವರ ಮನೆ ಮುಂದೆ ನಿಂತು ಭಾವಚಿತ್ರ ತೆಗೆಸಿಕೊಂಡು ಬೋಗಸ್ ಬಿಲ್ ಸೃಷ್ಟಿಸಲಾಗಿದೆ ಎಂದು ದೂರಿದರು.
ಜಾಗಿರ ನಂದಿಹಾಳ ಸರ್ವೆ ನಂ.159ರಲ್ಲಿ ಮನೆ ನಿರ್ಮಿಸಲಾಗುತ್ತಿದೆ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ, ಯಾವುದೆ ಕ್ರಮ ಜರುಗಿಸಿಲ್ಲ. ಕೂಡಲೇ ಗ್ರಾಪಂ ಪಿಡಿಒ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ, ಉಗ್ರ ಹೋರಾಟ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ಶಿವಪುತ್ರ ಗಾಣದಾಳ, ಕಾರ್ಯದರ್ಶಿ ಮುತ್ತಣ್ಣ ಗುಡಿಹಾಳ, ಬಾಲನಗೌಡ ಪಾಟೀಲ್, ವಿಜಯ ಭಂಡಾರಿ, ಲಕ್ಷ್ಮಣ ಕಟ್ಟಿಮನಿ, ಶಂಕ್ರಪ್ಪ ಬೆಂಡೋಣಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.