ರಾಯಚೂರು

27ರಂದು ಲೋಕಾಅಹವಾಲು ಸ್ವೀಕಾರ

Published On :

ರಾಯಚೂರು: ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಜು.27ರಂದು ಜಿಲ್ಲೆಯ ಸಿಂಧನೂರು ಮತ್ತು ಮಾನವಿ ಪಟ್ಟಣಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಲಿದ್ದಾರೆ. ಈ ಬಗ್ಗೆ ಲೋಕಾಯುಕ್ತರ ಕಚೇರಿ ಪ್ರಕಟಣೆ ನೀಡಿದ್ದು, ಅಂದು ಬೆಳಗ್ಗೆ 10ರಿಂದ ಮಧ್ಯಾ 1ರವರೆಗೆ ಸಿಂಧನೂರಿನ ಪ್ರವಾಸಿ ಮಂದಿರದಲ್ಲಿ ಹಾಗೂ ಮಾನವಿ ಪ್ರವಾಸಿ ಮಂದಿರದಲ್ಲಿ ಅಂದು ಮಧ್ಯಾಹ್ನ 3 ರಿಂದ ಸಂಜೆಯ 5ರವರೆಗೆ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆಂದು ತಿಳಿಸಿದೆ.

ವ್ಯಕ್ತಿ ಆತ್ಮಹತ್ಯೆ
ರಾಯಚೂರು: ಮಾನವಿ ತಾಲೂಕಿನ ಮರಾಠಾ ಗ್ರಾಮದಲ್ಲಿ ಮಕ್ಕಳ ಸಾವಿನಿಂದ ಮಾನಸಿಕ ನೊಂದಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನನ್ನು ರಂಗಣ್ಣ(70) ಎಂದು ಗುರುತಿಸಲಾಗಿದೆ. ಈತನ ಇಬ್ಬರು ಮಕ್ಕಳು ಅನಾರೋಗ್ಯದಿಂದ ಬಳಲಿ ಎರಡು ವರ್ಷಗಳ ಹಿಂದೆ ಕೊನೆಯುಸಿರೆಳೆದಿದ್ದರು. ಅದರಿಂದ ನೊಂದಿದ್ದ ಈತ ಗ್ರಾಮದ ತನ್ನ ಮನೆಯಲ್ಲಿರಿಸಿದ್ದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.