ರಾಯಚೂರು

ಇಂದಿನಿಂದ ಜಿಲ್ಲಾ ಮಟ್ಟದ ಸ್ಪರ್ಧೆಗಳು

Published On :

ರಾಯಚೂರು: ಜಿಲ್ಲಾ ಮಟ್ಟದ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾಜೆಕ್ಟ್ ಸ್ಪರ್ಧೆಗಳು ಜು.27ರಿಂದ ಆಯೋಜಿಸಲಾಗಿದೆ. ಇಲ್ಲಿಗೆ ಸಮೀಪದ ಯರಮರಸ್ನ ಡಯಟ್ ಕೇಂದ್ರದಲ್ಲಿ ಜು.27 ರಿಂದ ಆ.1 ರವರೆಗೆ ಒಟ್ಟು ಮೂರು ಹಂತದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜು.27 ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್, ಸಂಸದರಾ ಫಕೀರಪ್ಪ, ಶಿವರಾಮಗೌಡ, ಜಿಪಂ ಅಧ್ಯಕ್ಷೆ ಲಲಿತಮ್ಮ, ಶಾಸಕರಾದ ವೆಂಕಟೇಶ ನಾಯಕ, ಹಂಪನಗೌಡ ಬಾದರ್ಲಿ ಸೇರಿ ಅನೇಕರು ಭಾಗವಹಿಸಲಿದ್ದಾರೆಂದು ತಿಳಿಸಿದೆ.
ವಿದ್ಯುತ್ ಸ್ಪರ್ಶ:
ಕಾರ್ಮಿಕನ ಸಾವು
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಗುತ್ತಿಗೆ ಕಾರ್ಮಿಕನೊಬ್ಬ ಶುಕ್ರವಾರ ಬೆಳಗ್ಗೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾನೆ. ಮೃತನನ್ನು ಆನಂದ ಕಾಳಿ(29) ಎಂದು ಗುರುತಿಸಲಾಗಿದೆ. ಈತ ವಿದ್ಯುತ್ ಕೇಂದ್ರದ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬಸ್ ಚೇಂಜರ್ ಬದಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿದ್ದು ಅದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಶಕ್ತಿನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಂಡಾ; ಹಾವು ಕಡಿದು ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗುಂಡಾ ಗ್ರಾಮದಲ್ಲಿ ಹಾವು ಕಡಿದು ಮಹಿಳೆ ಸಾವಿಗೀಡಾಗಿದ್ದಾಳೆ. ಮೃತಳನ್ನು ಮರಿಯಮ್ಮ(26) ಎಂದು ಗುರುತಿಸಲಾಗಿದೆ. ಈಕೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು, ಕೂಡಲೇ ಆಕೆಯನ್ನು ಬ್ಯಾಗವಾಟ್ ಗ್ರಾಮದಲ್ಲಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾಳೆ. ಈ ಬಗ್ಗೆ ಮಾನವಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.