ರಾಯಚೂರು

ನಾಳೆ ವಸಂತೋತ್ಸವ- 2013

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಜು.26
ನಗರದಲ್ಲಿ ಶ್ರೀಲಕ್ಷ್ಮಿ ಪರ್ಫಾರ್ಮಿಂಗ್ ಕಲಾ ಕೇಂದ್ರದ ವಾರ್ಷಿಕೋತ್ಸವ ನಿಮಿತ್ತ ಜು.28ರಂದು ವಸಂತೋತ್ಸವ- 2013 ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕೇಂದ್ರದ ಮುಖ್ಯಸ್ಥೆ ಶಿವಶಾಂತ ಬಿಸನಳ್ಳಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು ಕೃಷಿ ವಿವಿಯ ಸಭಾಂಗಣದಲ್ಲಿ ಜು. 28ರ ಸಂಜೆ 5.30ಕ್ಕೆ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ್ ಸಿಂಗ್ ಉದ್ಘಾಟಿಸಲಿದ್ದಾರೆಂದು ತಿಳಿಸಿದರು. ಅಧ್ಯಕ್ಷತೆಯನ್ನು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಪಿ.ಕೃಷ್ಣಭಟ್ ವಹಿಸುವರು. ಮುಖ್ಯ ಅತಿಥಿಗಳಾಗಿ ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್, ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ, ಸಹಾಯಕ ಆಯುಕ್ತೆ ಮಂಜುಶ್ರೀ, ಎಎಸ್ಪಿ ಡಾ. ದಿವ್ಯಾ ಗೋಪಿನಾಥ್, ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಕಲಾವಿದರಿಗೆ ಸನ್ಮಾನ: ಈ ವೇಳೆ ಖ್ಯಾತ ಹಿಂದೂಸ್ತಾನಿ ಗಾಯಕ ಅಂಬಯ್ಯ ನೂಲಿ, ಕವಯಿತ್ರಿ ಬಾನು ಬೇಗಂ ಅವರನ್ನು ಸನ್ಮಾನಿಸಲಾಗುತ್ತದೆ. ಕೇಂದ್ರದ ತರಬೇತುದಾರ, ಗುರು ಸುಜೇಂದ್ರಬಾಬು ಅವರಿಂದ ಭರತನಾಟ್ಯ, ಸುಪ್ರಿಯಾ ಬಿಸನಳ್ಳಿ ಹಾಗೂ ಶ್ರೀಲಕ್ಷ್ಮೀ ಬಿಸನಳ್ಳಿ ಅವರಿಂದ ಭರತ ನಾಟ್ಯ ಪ್ರದರ್ಶನ, ಆಂಧ್ರದ ರಾಜಮಂಡ್ರಿಯ ಲಲಿತಾ ಸಿಂಧೂರಿ ಮತ್ತು ಡಾ. ಅಜಯ್ ಕುಮಾರ್ ಅವರಿಂದ ಕುಚುಪುಡಿ ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಉದ್ದೇಶ: ದಕ್ಷಿಣ ಕರ್ನಾಟಕದಲ್ಲಿ ಹೆಚ್ಚು ಪರಿಚಿತವಿರುವ ಭರತನಾಟ್ಯದಂಥ ಕಲೆಯನ್ನು ಉತ್ತರ ಕರ್ನಾಟಕದಲ್ಲಿ ಪರಿಚಯಿಸಿ ಪ್ರತಿಭೆಗಳಿಗೆ ಪ್ರೋತ್ಸಾಹಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಆಸಕ್ತರು ಮುಂದೆ ಬಂದಲ್ಲಿ ಉಚಿತವಾಗಿ ನೃತ್ಯ ಕಲಿಕೆಗೆ ಅವಕಾಶ ಕಲ್ಪಿಸಲಿದೆ ಎಂದು ಹೇಳಿದರು. ನಗರದ ಯರಮರಸ್ ಬಳಿಯ ಕನಕದಾಸ ಅನಾಥ ಮಕ್ಕಳ ಶಾಲೆಯ ಮಕ್ಕಳಿಗೆ ಭರತನಾಟ್ಯ ಮತ್ತು ಸಂಗೀತದ ಪಾಠ ನೀಡಲು ಸಂಸ್ಥೆಯು ಉದ್ದೇಶಿಸಿದೆ ಎಂದರು. ದಂಡಪ್ಪ ಬಿರಾದಾರ್, ಸುಜೇಂದ್ರ ಬಾಬು, ಸುಪ್ರಿಯಾ ಬಿಸನಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.