ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಿ
ರಾಯಚೂರು: ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಿ ಯೋಜನೆಗಳ ಯಶಸ್ಸಿಗೆ ಭಾರತೀಯ ಕುಟುಂಬ ಯೋಜನಾ ಸಂಘ (ಎಫ್ಪಿಎ) ಶ್ರಮಿಸಲಿ ಎಂದು ಶಾಸಕ ಡಾ. ಶಿವರಾಜ್ ಪಾಟೀಲ್ ಸಲಹೆ ನೀಡಿದರು.
ಇಲ್ಲಿನ ಟ್ಯಾಗೋರ್ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಎಫ್ಪಿಎ ಸಂಸ್ಥಾಪನಾ ದಿನ ಹಾಗೂ ವಿಶ್ವ ಜನಸಂಖ್ಯೆ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳು ಯಶಸ್ಸು ಕಾಣಲು ಸರ್ಕಾರೇತರ ಸಂಸ್ಥೆಗಳ ಪರಿಶ್ರಮ ಅವಶ್ಯಕ. ಇಂಥ ಪರಿಸ್ಥಿತಿಯಲ್ಲಿ ಎಫ್ಪಿಎ ಸಂಸ್ಥೆಯು ಮಹಿಳೆ ಮತ್ತು ಮಗುವಿನ ರಕ್ಷಣೆ ಕಾರ್ಯದಲ್ಲಿ ಸಾಕಷ್ಟು ಸಾಧನೆ ಮಾಡಿದೆ ಎಂದು ಹೇಳಿದರು.
ಜನಸಂಖ್ಯೆ ನಿಯಂತ್ರಣಾ ಕ್ರಮಗಳು, ಕುಟುಂಬ ನಿರ್ವಹಣೆ, ತಾಯಿ- ಮಗುವಿನ ಆರೋಗ್ಯ ಕುರಿತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಎಫ್ಪಿಎ ಜಾಗೃತಿ ಕಾರ್ಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುವಂತೆ ಕರೆ ನೀಡಿದರು.
ಎಫ್ಪಿಎ ಸಂಘದ ಕಲ್ಯಾಣ ಕಾರ್ಯಗಳಿಗೆ ಸಹಕಾರ ನೀಡಲು ತಾವು ಸದಾ ಸಿದ್ಧರೆಂದ ಅವರು, ಜನಪರ ಕಾರ್ಯಕ್ರಮ, ಯೋಜನೆಗಳನ್ನು ತಾವು ಬೆಂಬಲಿಸುವುದಾಗಿ ತಿಳಿಸಿದರು. ಸಂಘದ ಮಾಜಿ ಅಧ್ಯಕ್ಷ ನರಸಣ್ಣ ಮಾತನಾಡಿ, ದೇಶವು ಅಭಿವೃದ್ಧಿಯಾಗಲು ಕೃಷಿ, ಶಿಕ್ಷಣ ಮತ್ತು ರಕ್ಷಣೆ ಜತೆ ಜತೆಗೆ ಜನರ ಆರೋಗ್ಯ ಮಟ್ಟದ ಸುಧಾರಣೆಯೂ ತೀರಾ ಅವಶ್ಯಕ. ಈ ನಿಟ್ಟಿನಲ್ಲಿ ಜನಾರೋಗ್ಯ ಕಾಪಾಡುವಲ್ಲಿ ಸರ್ಕಾರಗಳು ರೂಪಿಸುವ ಯೋಜನೆಗಳು ಶಿಕ್ಷಣ ಮತ್ತು ಆರೋಗ್ಯದ ವಿಚಾರ ಒಳಗೊಂಡಿರುವುದರಿಂದ ಎನ್ಜಿಒಗಳು ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸುವಂತೆ ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ. ತಿಮ್ಮಯ್ಯ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾರಾಯಣಪ್ಪ, ಐಎಂಎ ಅಧ್ಯಕ್ಷ ಡಾ. ಸಿ.ಎನ್. ಕುಲಕರ್ಣಿ, ಕೃಷಿ ವಿವಿ ಪ್ರಾಧ್ಯಾಪಕಿ ಜಾಗೃತಿ ದೇಶಮಾನೆ, ಮಾನಸಿಕ ರೋಗ ತಜ್ಞ ಡಾ. ವಿ.ಎ. ಪಾಲಿಪಾಟೀಲ್, ಸಂಘದ ಮುಖ್ಯಸ್ಥರಾದ ಎಚ್. ಹನಮಂತಪ್ಪ, ಈರಮ್ಮ, ಲಲಿತಾ ಮತ್ತಿತರರು ಇದ್ದರು.
ಟಾಗೋರ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

