ನಿರುದ್ಯೋಗಿಗಳಿಗೆ ತರಬೇತಿ, ಆಹ್ವಾನ
ರಾಯಚೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯ ಹಿಂದುಳಿದ ವರ್ಗಗಳ ನಿರುದ್ಯೋಗಿ ಮಹಿಳಾ- ಪುರುಷ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನಿರ್ವಹಿಸುವ ಮೈಸೂರಿನ ಸೆಂಟ್ರಲ್ ಇನ್ಸಟ್ಯೂಟ್ ಆಫ್ ಪ್ಲಾಸ್ಟಿಕ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯಿಂದ ವಿವಿಧ ವೃತ್ತಿಗಳಲ್ಲಿ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯ ಕಚೇರಿಯಿಂದ ಅಥವಾ ಇಲಾಖೆಯ ವೆಬ್ಸೈಟ್ ವಿಳಾಸ ಢಿಢಿಢಿ.್ಞಛ್ಛಿಢಿಜ.್ಝಟಿ
ದಿಂದ ಪಡೆದು, ಅರ್ಜಿಯನ್ನು ಆ.8 ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ವೃತ್ತಿ ತರಬೇತಿಯು 6 ತಿಂಗಳದ್ದಾಗಿದ್ದು, 18ರಿಂದ 35 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಲ್ಲಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಆ.21, ಆ.22 ರಂದು ಮಾಡಲಾಗುವುದು.
ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆಯ ವೆಬ್ಸೈಟ್ ಢಿಢಿಢಿ.್ಞಛ್ಛಿಢಿಜ.್ಝಟಿ ನಲ್ಲಿ ಆ.27 ರಂದು ಪ್ರಕಟವಾಗುವ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಮತ್ತು ಕೋರ್ಸ್ವಾರು ನಿಗದಿಪಡಿಸಿದ ವಿದ್ಯಾ ಅರ್ಹತೆಯ ಮೂಲ ಅಂಕಪಟ್ಟಿ ಮತ್ತು ಮುಚ್ಚಳಿಕೆ ಪ್ರಮಾಣ ಪತ್ರದೊಂದಿಗೆ ಮೈಸೂರು ಸಂಸ್ಥೆಗೆ ಸೆ.2ರಿಂದ ತರಬೇತಿಗೆ ಹಾಜರಾಗಬೇಕಾಗುತ್ತದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

