ರಾಯಚೂರು

ಪಡಿತರ ಆಹಾರ ಪೂರೈಕೆಗೆ ಬುದ್ದಿನ್ನಿ ಗ್ರಾಮಸ್ಥರ ಆಗ್ರಹ

Published On :

ಲಿಂಗಸ್ಗೂರು: ತಾಲೂಕಿನ ಬುದ್ದಿನ್ನಿ ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ಆಹಾರ ಹಾಗೂ ಸೀಮೆಎಣ್ಣೆ ಸರಬರಾಜು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಸಹಾಯಕ ಆಯುಕ್ತರ ಕಚೇರಿ ಶಿರಸ್ತೇದಾರ ಭಾನುಮತಿ ಅವರಿಗೆ ಮನವಿ ಸಲ್ಲಿಸಿದರು.
ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಮನವಿ ಮಾಡಿದ ಅವರು, ಕಳೆದ ಸುಮಾರು ಎರಡು ತಿಂಗಳ ಹಿಂದೆ ತಹಸೀಲ್ದಾರರಿಗೆ ಪಡಿತರ ಆಹಾರ ಮತ್ತು ಸೀಮೆಎಣ್ಣೆ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದಾಗ ಜುಲೈ ತಿಂಗಳಲ್ಲಿ ಸರಬರಾಜು ಮಾಡುವುದಾಗಿ ಭರವಸೆ ನೀಡಿದ್ದರು.
ಆದರೆ ತಿಂಗಳು ಮುಗಿದರೂ ಇನ್ನು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಬುದ್ದಿನ್ನಿ ಗ್ರಾಮಸ್ಥರಿಗೆ ಪಡಿತರ ಆಹಾರ ಮತ್ತು ಸೀಮೆಎಣ್ಣೆ ವಿತರಿಸಬೇಕು. ಇಲ್ಲದಿದ್ದರೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ಬಾಲನಗೌಡ, ಮಸ್ಕಿ ಕ್ಷೇತ್ರದ ಅಧ್ಯಕ್ಷ ಯಮನೂರು ಒಡೆಯರ, ಮಟ್ಟೂರು ಹೋಬಳಿ ಘಟಕದ ಅಧ್ಯಕ್ಷ ಅಮರೇಶ ಬುದ್ದಿನ್ನಿ, ಕಾರ್ಯಕರ್ತರಾದ ಕಿರಣ ಮುರಾರಿ, ಆದಪ್ಪ ಬುದ್ದಿನ್ನಿ, ಮುತ್ತಣ್ಣ ಹಡಪದ, ವಿಜಯ ಭಂಡಾರಿ, ಗ್ರಾಮದ ಮುಖಂಡರಾದ ಅಮರಪ್ಪ, ಆದಪ್ಪ, ಚನ್ನಮಲ್ಲಪ್ಪ, ಅಮರೇಶ, ಬಾಳಮ್ಮ, ಶರಣಮ್ಮ, ದುರುಗಮ್ಮ, ಯಲ್ಲಮ್ಮ, ರುದ್ರಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.