ಶಾಲಾವರಣವೇ ಬಯಲು ಶೌಚಾಲಯ!
ಕನ್ನಡಪ್ರಭ ವಾರ್ತೆ ಸಿಂಧನೂರು ಜು.30
ನಗರದ ಶಹರ ಪೊಲೀಸ್ ಠಾಣೆ ಹಿಂದಿರುವ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮಕ್ಕೆ ಭಾಗವಹಿಸಲು ಮಂಗಳವಾರ ಸಿವಿಲ್ ಪ್ರಧಾನ ನ್ಯಾಯಾಧೀಶೆ ಬಿ.ಎಸ್. ರಾಯಣ್ಣನವರ್ ಶಾಲೆಯ ಆವರಣವೆಲ್ಲಾ ಬಯಲು ಶೌಚಾಲಯವಾಗಿದ್ದನ್ನು ಕಂಡು ದಂಗಾದ ಘಟನೆ ಜರುಗಿತು.
ಶಾಲೆಯ ವಾತಾವರಣ ಇಲ್ಲದೆ ಹೋಗಿದ್ದನ್ನು ಗಮನಿಸಿದ ನ್ಯಾಯಾಧೀಶೆ ಇಂತಹ ಕಲುಷಿತ ವಾತಾವರಣದಲ್ಲಿ ವಿದ್ಯಾರ್ಥಿನಿಯರು ಹೇಗೆ ಅಭ್ಯಾಸ ಮಾಡಬೇಕೆಂದು ಗಾಬರಿಗೊಂಡು ಶಾಲೆಯ ಪಕ್ಕದಲ್ಲಿಯೇ ಇರುವ ಬಿ.ಇ.ಒ. ಕಚೇರಿಯ ಸಿಬ್ಬಂದಿಯೊಬ್ಬರನ್ನು ಕರೆದು ಕೂಡಲೇ ಸ್ವಚ್ಛಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿ ಮಧ್ಯಾಹ್ನ 2 ಗಂಟೆಯೊಳಗೆ ಬಿಇಒ ತಮ್ಮನ್ನು ಭೇಟಿಯಾಗುವಂತೆ ಹೇಳಿದರು. ಹಾಗೆಯೇ ನಗರಸಭೆಯ ಪೌರಾಯುಕ್ತರು ಭೇಟಿಯಾಗುವಂತೆ ಸ್ಥಳದಲ್ಲೇ ಸೂಚಿಸಿದರು.
ನಂತರ ಶಾಲೆಯ ತಗಡಿನ ಶೆಡ್ನಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ ನಡೆಯಿತು. ಈ ಜಾಗೆ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಇಲ್ಲಿಯ ವಿದ್ಯಾರ್ಥಿಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮಧ್ಯಾಹ್ನ 2ಕ್ಕೆ ಬಿಇಒ ವೃಷಭೇಂದ್ರಯ್ಯಸ್ವಾಮಿ, ನಗರಸಭೆ ಅಧಿಕಾರಿಗಳಾದ ಸತ್ಯನಾರಾಯಣ, ಅಮರೇಶ ನ್ಯಾಯಾಧೀಶರನ್ನು ಭೇಟಿಯಾಗಿ ಹೋದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೈರ್ಮಲ್ಯ ನಿರೀಕ್ಷಕ ಅಮರೇಶ ವಿವಾದಿತ ಜಾಗೆಯಾಗಿರುವುದರಿಂದ ಶಾಶ್ವತ ಪರಿಹಾರ ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದರೂ ಕೂಡಲೇ ನಗರಸಭೆ ಸಿಬ್ಬಂದಿಯನ್ನು ಕಳುಹಿಸಿ ಜಾಗೆಯನ್ನು ಸ್ವಚ್ಛಗೊಳಿಸುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

