ರಾಯಚೂರು

ಶಿಷ್ಯ ವೇತನಕ್ಕೆ ಅರ್ಜಿ

Published On :

ದೇವದುರ್ಗ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಅರ್ಜಿ ಕರೆಯಲಾಗಿದೆ.
ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿಗಳು ಪ್ರಕಟಣೆ ನೀಡಿದ್ದು, ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಆಧಾರ್ ಸಂಖ್ಯೆ ಮತ್ತು ಯಾವುದೇ ಶೆಡ್ಯೂಲ್ಡ್ ಬ್ಯಾಂಕಿನಲ್ಲಿ ತೆರೆದ ಬ್ಯಾಂಕ್ ಖಾತೆ ಸಂಖ್ಯೆ ಕಡ್ಡಾಯವಾಗಿ ಸಲ್ಲಿಸಬೇಕು. ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಫಾರಂಗಳು ಈ ಕಚೇರಿಯಲ್ಲಿ ಲಭ್ಯವಿದ್ದು, ವಿದ್ಯಾರ್ಥಿಯ ಪೋಷಕರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಳೆದ ಸಾಲಿನ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜ್ ಸಲ್ಲಿಸಲು ಆ.30 ಕಡೆಯ ದಿನ ಎಂದು ತಿಳಿಸಿದ್ದಾರೆ.
ಮಹಿಳೆ ಶವ ಪತ್ತೆ
ರಾಯಚೂರು: ತಾಲೂಕಿನ ತಲಮಾರಿ ಬಳಿ ತುಂಗಭದ್ರಾ ಕಾಲುವೆಯ ವಿತರಣೆ ಕಾಲುವೆಯಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾಗಿದೆ. ಮೃತಳನ್ನು ಇಲ್ಲಿನ ಅಶೋಕ ನಗರದ ರಾಮಲಮ್ಮ ಎಂದು ಗುರುತಿಸಲಾಗಿದೆ. ಈಕೆ ಈಚೇಗೆ ಗಿಲ್ಲೆಸೂಗೂರು ಬಳಿಯ ಕಾಲುವೆಯಲ್ಲಿ ಸ್ಮಾನಕ್ಕೆಂದು ಇಳಿದಿದ್ದು, ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಳು. ಈಕೆಯ ಶವ ತಲಮಾರಿ ಗ್ರಾಮದ ಬಳಿ ವಿತರಣೆ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಡಪನೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.