ಇಂದಿನಿಂದ ಕ್ಷೀರ ವಿತರಣೆ
ರಾಯಚೂರು: ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಹಾಲು ವಿತರಿಸುವ ಕಾರ್ಯಕ್ರಮವನ್ನು ನಗರದಲ್ಲಿ ಆ. 1ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಅಂದು ನಗರದ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಯೋಜನೆಯನ್ನು ಸಚಿವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ವಹಿಸಲಿದ್ದಾರೆ. ಸಂಸದರಾದ ಎಸ್. ಫಕೀರಪ್ಪ ಹಾಗೂ ಶಿವರಾಮಗೌಡ, ಜಿಪಂ ಅಧ್ಯಕ್ಷೆ ಲಲಿತಮ್ಮ, ಶಾಸಕರಾದ ಎ.ವೆಂಕಟೇಶ ನಾಯಕ, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಪ್ರತಾಪಗೌಡ ಪಾಟೀಲ್, ಮಾನಪ್ಪ ವಜ್ಜಲ್, ತಿಪ್ಪರಾಜು ಹವಾಲ್ದಾರ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆಂದು ಜಿಲ್ಲಾಡಳಿತ ತಿಳಿಸಿದೆ.
ಇಂದು ನಗರಕ್ಕೆ
ಸಚಿವ ಪಾಟೀಲ್
ರಾಯಚೂರು: ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಆ.1ರಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ ಉದ್ಯಾನ ಎಕ್ಸ್ಪ್ರೆಸ್ ಮೂಲಕ ಬೆಂಗಳೂರಿನಿಂದ ರಾಯಚೂರು ನಗರಕ್ಕೆ ಆಗಮಿಸಿ ನಂತರ ಬೆಳಗ್ಗೆ 10.30ಕ್ಕೆ ರಂಗಮಂದಿರದಲ್ಲಿ ಆಯೋಜಿಸಿರುವ ಶಾಲಾ ಮತ್ತು ಅಂಗನವಾಡಿ ಮಕ್ಕಳಿಗೆ ಹಾಲು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ 3ಕ್ಕೆ ಗುಲ್ಬರ್ಗಕ್ಕೆ ತೆರಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಜಿಪಂ ಸಿಇಒ ಮನವಿ
ರಾಯಚೂರು: ಇಲ್ಲಿನ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಮುದ್ದುಮೋಹನ್ ಅವರ ಗಮನಕ್ಕೆ ತರಬಯಸುವ ಮಹತ್ವದ ವಿಷಯಗಳನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅದೇ ರೀತಿ ಅವರ ಗಮನಕ್ಕೆ ತರಲಿಚ್ಛಿಸುವ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಪತ್ರಗಳನ್ನು ಡಾ. ಮುದ್ದುಮೋಹನ, ಸಿಇಒ ಜಿಪಂ, ರಾಯಚೂರು ದೂ. 08532-228448, 227136 ಇಲ್ಲಿಗೆ ಅಥವಾ ಅವರ ಮೊ. 9480874000 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

