ಕಾರ್ಮಿಕರ ಹಿತ ಕಾಯುವಲ್ಲಿ ಸರ್ಕಾರಗಳು ವಿಫಲ; ಆರೋಪ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಜು.31
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರ ಹಿತ ಕಾಯುವಲ್ಲಿ ವಿಫಲವಾಗಿವೆ ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್- ಸಿಐಟಿಯು) ರಾಜ್ಯ ಕಾರ್ಯದರ್ಶಿ ಆರ್.ಎಸ್. ಬಸವರಾಜ ಆರೋಪಿಸಿದರು.
ಪಟ್ಟಣದ ಭಾರತೀಯ ವೈದ್ಯಕೀಯ ಸಂಘದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಿಐಟಿಯು 3ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇಂಧನ, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ, ಕೂಲಿ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಗ್ಯಾಟ್ ಒಪ್ಪಂದದಿಂದ ಉದಾರೀಕರಣ, ಜಾಗತೀಕರಣ ಮತ್ತು ಖಾಸಗೀಕರಣ ಆರಂಭಗೊಂಡು ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡುಗಳು ಹಾಗೂ ಆಶ್ರಯ ಮನೆಗಳು ದೊರೆಯದೆ ಉಳ್ಳವರ ಪಾಲಾಗುತ್ತಿವೆ ಎಂದು ಟೀಕಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಲಿ, ಕಾರ್ಮಿಕರ ಹಿತರಕ್ಷಣೆ ಕಾಪಾಡುವತ್ತ ಗಮನ ಹರಿಸಬೇಕು. ದೇಶದಲ್ಲಿ ಕಾರ್ಮಿಕರ ಪರವಾದ ಕಾನೂನು ಜಾರಿಯಾಗಬೇಕು. ಕನಿಷ್ಠ 10- 15 ಸಾವಿರ ಕೂಲಿ ನೀಡಬೇಕು. ಸುಸಜ್ಜಿತ ಮನೆ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಕ್ಷಾ ಖಾದ್ರಿ, ತಾಲೂಕು ಅಧ್ಯಕ್ಷ ಅಮರೇಶ ಕನ್ನಾಳ, ಕಾರ್ಯದರ್ಶಿ ಕೆ.ಶಿವಾನಂದ, ಹಮಾಲರ ಸಂಘದ ಜಿಲ್ಲಾಧ್ಯಕ್ಷ ಯಂಕಪ್ಪ ಕೆಂಗಲ್, ಮುಖಂಡರಾದ ಎಂ.ಸಿ. ಲಿಂಗಪ್ಪ, ವೆಂಕೋಬ, ಬಸಮ್ಮ ಮುದಗಲ್, ತುಳಜಾಬಾಯಿ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

