ಪತ್ರಿಕಾ ರಂಗದಲ್ಲಿ ಮೌಲ್ಯಗಳ ಕುಸಿತ; ನಾಯಕ
ಕನ್ನಡಪ್ರಭ ವಾರ್ತೆ, ದೇವದುರ್ಗ, ಜು.31
ಪತ್ರಿಕಾರಂಗವು ಮೌಲ್ಯಗಳಿಂದ ದೂರ ಸರಿಯುತ್ತಿರುವುದು ಆತಂಕದ ಸಂಗತಿಯಾಗಿದೆ. ದೇಶದಲ್ಲಿ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮತ್ತು ಪತ್ರಿಕಾರಂಗಗಳಲ್ಲಿ ಮೌಲ್ಯಗಳು ಮರೆಯಾಗುತ್ತಿವೆ ಎಂದು ಕಾಂಗ್ರೆಸ್ ಯುವ ಮುಖಂಡ ಬಿ.ವಿ. ನಾಯಕ ಕಳವಳ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬುಧವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅವರು ಮಾತನಾಡಿದರು.
ವ್ಯವಸ್ಥೆ ಮತ್ತು ಸಮಾಜವನ್ನು ಸರಿದಾರಿಯಲ್ಲಿ ಮುನ್ನಡೆಸುವಲ್ಲಿ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಯಾವುದೇ ಪಕ್ಷ, ವ್ಯಕ್ತಿಯ ಪರವಾಗಿ ಇಲ್ಲವೇ ವಿರುದ್ಧ ಕಾರ್ಯನಿರ್ವಹಿಸದೇ ಪ್ರಾಮಾಣಿಕ ಸೇವೆ ಸಲ್ಲಿಸಲು ಮನವಿ ಮಾಡಿದರು. ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಬಿ. ವೆಂಕಟಸಿಂಗ್ ವಿಶೇಷ ಉಪನ್ಯಾಸ ನೀಡಿದರು.
ಸನ್ಮಾನ: ದೇವನಾಂಪ್ರೀಯ ಪ್ರಶಸ್ತಿ ಪುರಸ್ಕೃತ 'ಕನ್ನಡಪ್ರಭ' ವರದಿಗಾರ ಮೈನುದ್ದೀನ್ ಕಾಟಮಳ್ಳಿ, ಬಂದೇನವಾಜ್ ನಾಗಡದಿನ್ನಿ, ಹಾಗೂ ತಾಲೂಕು ಸಮಿತಿಯಿಂದ ದುರ್ಗಶ್ರೀ ಪ್ರಶಸ್ತಿ ಪಡೆದ ನರಸಿಂಗ್ರಾವ್ ಸರ್ಕಿಲ್, ಸೂಗೂರೇಶ ಗುಡಿ ಹಾಗೂ ಹಿರಿಯ ಪತ್ರಿಕಾ ವಿತರಕ ಮಹಿಪಾಲರಡ್ಡಿ ಅವರನ್ನು ಈ ವೇಳೆ ಸನ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚನ್ನಬಸವಣ್ಣ, ತಹಸೀಲ್ದಾರ್ ತುಕರಾಮ ಕಲ್ಯಾಣ್ಕರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಹಾಂತೇಶ ಮಸ್ಕಿ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ವೆಂಕಟೇಶ ನೀಲಗಲ್, ಬಸನಗೌಡ ದೇಸಾಯಿ, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ಭಟ್, ತಾಪಂ ಸದಸ್ಯ ಸತ್ಯನಾರಾಯಣ ನಾಯಕ, ಮಲ್ಲೇಶ ಮಾಶೆಟ್ಟಿ ಸೇರಿ ಅನೇಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

