ಹಾಲು ಉತ್ಪಾದನೆ: ರಾಜ್ಯಕ್ಕೆ 2ನೇ ಸ್ಥಾನ
ರಾಯಚೂರು: ದೇಶದ ಹಾಲಿನ ಉತ್ಪಾದನೆಯಲ್ಲಿ ಗುಜರಾತ್ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬೆಣ್ಣೆ ಹಾಗೂ ಇತರೆ ಹಾಲಿನ ಉತ್ಪನ್ನಗಳ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಕೆಎಂಎಫ್ ನಿರ್ದೇಶಕ ಸತ್ಯನಾರಾಯಣ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಕೊಪ್ಪಳ-ಬಳ್ಳಾರಿ-ರಾಯಚೂರು ಹಾಲು ಒಕ್ಕೂಟದಲ್ಲಿ 1.50 ಲಕ್ಷ ಲೀಟರ್ ಹಾಲಿನ ಉತ್ಪಾದನೆಯಿದ್ದು, 2 ಸಬ್ಸಿಡಿ ರೈತರಿಗೆ ದೊರೆಯುತ್ತಿದೆ ಎಂದು ಹೇಳಿದರು.
539 ಸಹಕಾರ ಸಂಘಗಳಿಂದ ಕಾರ್ಯ: ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಉತ್ಪಾದಕರ 539 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ರಾಯಚೂರಲ್ಲಿ ಡೈರಿ ನವೀಕರಣ, ಕೂಡ್ಲಿಗಿಯಲ್ಲಿ ಆಟೋಮ್ಯಾಟಿಕ್ ಪ್ಲಾಂಟ್ ಹಾಗೂ ಕೊಪ್ಪಳದಲ್ಲಿ ಒಂದು ಘಟಕ ಸ್ಥಾಪನೆಯ ಉದ್ದೇಶ ಒಕ್ಕೂಟದ್ದಾಗಿದೆ ಎಂದು ಹೇಳಿದರು.
ನೂತನ 9 ಟನ್ ಸಾಮರ್ಥ್ಯದ ಐಸ್ ಕ್ರೀಂ ಉತ್ಪಾದನೆ ಘಟಕವನ್ನು ಬಳ್ಳಾರಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದು ಉತ್ತರ ಕರ್ನಾಟಕ ಜನರಿಗೆ ಗುಣಮಟ್ಟದ ಐಸ್ಕ್ರೀಮ್ ನೀಡುವ ಘಟಕವಾಗಲಿದೆ. ನಗರದ ಮಾವಿನ ಕೆರೆ, ಅಂಬೇಡ್ಕರ್ ನಗರ, ರೇಲ್ವೆ ಸ್ಟೇಷನ್ಗಳಲ್ಲಿ ಕೆಎಂಎಫ್ ಮಾರಾಟ ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಜಿಲ್ಲಾಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಶ್ರೀನಿವಾಸ ಮೂರ್ತಿ ಮಾತನಾಡಿ, ಹಾಲು ಉತ್ಪಾದನೆಯಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಪ್ರತಿಯೊಬ್ಬರೂ ಹಾಲಿನ ಉಪಯೋಗವನ್ನು ಪಡೆದು ಆರೋಗ್ಯ ಸಂಪತ್ತು ಹೆಚ್ಚಿಸಿಕೊಳ್ಳಬೇಕು ಎಂದರು.
ಡಾ.ಸಿ.ಎನ್. ಕುಲಕರ್ಣಿ, ರಾಯಚೂರು ಒಕ್ಕೂಟದ ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕ ರಾಮಚಂದ್ರ, ಶಿವಶಂಕರ್, ರಾಮು ಪೆರಿಟಾಲ ಸೇರಿ ಅನೇಕರಿದ್ದರು. ರಿಮ್ಸ್ ಕಾಲೇಜು, ಜಿಲ್ಲಾಸ್ಪತ್ರೆ ಹಾಗೂ ಕೆಎಂಎಫ್ ಸಿಬ್ಬಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

