ರಾಯಚೂರು

ಬೀದಿ ನಾಟಕ: ಕಲಾ ತಂಡಗಳಿಗೆ ಆಹ್ವಾನ

Published On :

ರಾಯಚೂರು: ಪ್ರಸಕ್ತ ವರ್ಷ ವಾರ್ತಾ ಇಲಾಖೆವತಿಯಿಂದ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿನ ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಯೊಂದೂ ಬೀದಿ ನಾಟಕ ತಂಡದಲ್ಲಿ ಕನಿಷ್ಠ 10 ಜನ ಕಲಾವಿದರಿರಬೇಕು. ಅದರಲ್ಲಿ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯವಾಗಿರಬೇಕು. ಬೀದಿ ನಾಟಕದ ಜತೆಗೆ ಸಂಗೀತ ಕಾರ್ಯಕ್ರಮ ಸಹ ಕಲಾವಿದರು ಪ್ರಸ್ತುತಪಡಿಸಬೇಕಿದೆ. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಕಾರ್ಯಕ್ರಮಗಳನ್ನು ಈ ತಂಡಗಳು ತಮ್ಮ ಕಲೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮುಟ್ಟಿಸಬೇಕಾಗುತ್ತದೆ.
ಕಾರಣ ತಂಡಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಂಡಗಳಿಗೆ ಪ್ರಾಶಸ್ತ್ಯ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ತಂಡದ ಮುಖ್ಯಸ್ಥರು, ಜಿಲ್ಲಾ ವಾರ್ತಾಧಿಕಾರಿಗಳನ್ನು ಕಚೇರಿಯ ಅವಧಿಯಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಜೂ. 10ರೊಳಗೆ ಸಲ್ಲಿಸಬೇಕು.
ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ.
ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಆಗಮಿಸಬೇಕು. ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ ರಾಯಚೂರು ಕಚೇರಿ ಹಾಗೂ ದೂರವಾಣಿ ಸಂಖ್ಯೆ-08532-226050 ಇಲ್ಲಿಗೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.