ರಾಯಚೂರು

ಮತಾಂತರ ಬೇಡ, ಸರ್ವಜಾತಿ ಜನಾಂಗದ ಕಲ್ಯಾಣದ ಭರವಸೆ

Published On :

ರಾಯಚೂರು: ವಿದ್ಯಾಮಠದ ಶೈಕ್ಷಣಿಕ ಅಭಿವೃದ್ಧಿಯ ಆಶಯ. ಧರ್ಮ ಪಾಲನೆ ಮತ್ತು ಪ್ರಚಾರಕ್ಕೆ ಹೆಚ್ಚಿನ ಮಹತ್ವ. ಮತಾಂತರ ಬೇಡ ಎಂಬ ಸ್ಪಷ್ಟ ಸೂಚನೆ. ಜತೆಗೆ ಸರ್ವಜಾತಿ ಜನಾಂಗದವರ ಕಲ್ಯಾಣದ ಭರವಸೆ. ಶ್ರೀಮಠದ ಸಮಗ್ರ ಪ್ರಗತಿಯ ಕನಸು.
ಮಂತ್ರಾಲಯದಲ್ಲಿ ಶನಿವಾರ ರಾತ್ರಿ ನೂತನ ಉತ್ತರಾಧಿಕಾರಿಗಳಿಗೆ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನೂತನ ಉತ್ತರಾಧಿಕಾರಿಗಳಾದ ಶ್ರೀಸುಬುಧೇಂದ್ರ ತೀರ್ಥರ ಅನುಗ್ರಹ ಸಂದೇಶದ ಪ್ರಮುಖಾಂಶಗಳಿವು. ನೂತನ ಉತ್ತರಾಧಿಕಾರಿಗಳ ಮಂತ್ರಾಲಯ ಪುರಪ್ರವೇಶದ ಸಂದರ್ಭದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ  ಅವರು ಸಂದೇಶ ನೀಡಿದರು.
ಸಮಾರಂಭದಲ್ಲಿ ಪೀಠಾಧಿಪತಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಶ್ರೀಸುಯಮೀಂದ್ರಾಚಾರ್ಯ, ವಿ.ಆರ್. ಪಂಚಮುಖಿ, ಶ್ರೀಪತಿ, ಮಾಧವ ಶೆಟ್ಟಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ವಿದ್ವಾಂಸರು, ಪಂಡಿತರುಗಳು ಪಾಲ್ಗೊಂಡಿದ್ದರು. ಶ್ರೀಮಠದ ಸಿಬ್ಬಂದಿ ಮತ್ತು ಭಕ್ತರು ಉಭಯಶ್ರೀಗಳನ್ನು ಈ ವೇಳೆ ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮೊದಲು ಮಂತ್ರಾಲಯ ಪುರಪ್ರವೇಶಿಸಿದ ಹಿರಿಯ ಶ್ರೀಗಳಾದ ಶ್ರೀಸುಯತೀಂದ್ರತೀರ್ಥರು ಹಾಗೂ ಕಿರಿಯ ಶ್ರೀಗಳಾದ ಶ್ರೀಸುಬುಧೇಂದ್ರ ತೀರ್ಥರನ್ನು ಭವ್ಯ ಮೆರವಣಿಗೆಯಲ್ಲಿ ಶ್ರೀಮಠಕ್ಕೆ ಕರೆತರಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.