ವಕೀಲರ ಸಂಘದ ಅಧ್ಯಕ್ಷರಾಗಿ ಭೀಮನಗೌಡ ಪುನರಾಯ್ಕೆ
ಸಿಂಧನೂರು: ತಾಲೂಕು ನ್ಯಾಯವಾದಿಗಳ ಸಂಘದ ಚುನಾವಣೆ ಜೂ.7ರಂದು ನಿಗದಿಯಾಗಿದ್ದರೂ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಶನಿವಾರ ಹಿಂಡೆದಿದ್ದರಿಂದ ಅಧ್ಯಕ್ಷರಾಗಿ ಕೆ.ಭೀಮನಗೌಡ ಅವಿರೋಧವಾಗಿ ಪುನರಾಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಕೆ.ಶರಣಬಸವ, ಮುತ್ಯಾಲರಾವ್ ಸ್ಪರ್ಧಿಸಿದ್ದರು. ಅವರು ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದಿದ್ದರಿಂದ ಕೆ.ಭೀಮನಗೌಡ ಅವಿರೋಧವಾಗಿ ಆಯ್ಕೆಯಾದರು.
ಅವಿರೋಧ ಆಯ್ಕೆ: ಅದರಂತೆ ಕಾರ್ಯದರ್ಶಿ ಸ್ಥಾನಕ್ಕೆ ಖಾಜಿಮಲಿಕ್ ಅಹ್ಮದ್, ವಿಜಯಪ್ಪ ಅರಳಹಳ್ಳಿ, ಪಾಲಾಕ್ಷ ಶಾಸ್ತ್ರಿ, ಸೋಮಲಿಂಗಪ್ಪ ನಾಮಪತ್ರ ಸಲ್ಲಿಸಿದ್ದರು. ಅವರು ಸಹ ನಾಮಪತ್ರಗಳನ್ನು ಹಿಂಪಡೆದಿದ್ದರಿಂದ ನಾಮಪತ್ರ ಸಲ್ಲಿಸಿದ್ದ ಹನುಮೇಶ ಕೊಡ್ಲಿ ಅವಿರೋಧವಾಗಿ ಆಯ್ಕೆಯಾದರು. ಖಜಾಂಚಿ ಸ್ಥಾನಕ್ಕೆ ಸುರೇಶ ರೆಡ್ಡಿ ಚನ್ನಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಎಲ್ಲರಿಗಿಂತ ಮೊದಲೇ ಅವಿರೋಧವಾಗಿ ಆಯ್ಕೆಯಾಗಿದ್ದರು.
ಆರೋಗ್ಯಕರ ವಾತಾವರಣ ನಿರ್ಮಾಣ ಉದ್ದೇಶ?: ನ್ಯಾಯವಾದಿಗಳ ಸಂಘದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಹಿರಿಯ ವಕೀಲ ಎಚ್.ರಾಮನಗೌಡ ಸೇರಿದಂತೆ ಅನೇಕ ಹಿರಿಯ ನ್ಯಾಯವಾದಿಗಳ ಸಲಹೆ ಮೇರೆಗೆ ವಿವಿಧ ಸ್ಥಾನಗಳಿಗೆ ಸ್ಪರ್ಧಿಸಿದ್ದ ಆಕಾಂಕ್ಷಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡರು ಎಂದು ಅನೇಕ ನ್ಯಾಯವಾದಿಗಳು ಮಾತನಾಡಿಕೊಂಡರು. ಚುನಾವಣಾಧಿಕಾರಿಯಾಗಿ ಹಿರಿಯ ನ್ಯಾಯವಾದಿ ವಿರೂಪಾಕ್ಷಪ್ಪ ಗದ್ರಟಗಿ ಕಾರ್ಯನಿರ್ವಹಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಕಾರ್ಯದರ್ಶಿ ಹನುಮೇಶ ಕೊಡ್ಲಿ, ತಮ್ಮ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ ನ್ಯಾಯವಾದಿಗಳ ಸಂಘದ ಸರ್ವ ಸದಸ್ಯರಿಗೆ ಕೃತಜ್ಞತೆಗಳನ್ನು ತಿಳಿಸಿದ ಅವರು ತಮ್ಮ ಅವಧಿಯಲ್ಲಿ ಎಲ್ಲರ ಸಹಕಾರ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

