ರಾಯಚೂರು

ಶಾಲಾ ಪ್ರಾರಂಭೋತ್ಸವ: ಸಮವಸ್ತ್ರ ವಿತರಣೆ

Published On :

ರಾಯಚೂರು: ತಾಲೂಕಿನ ಉಡಮಗಲ್- ಖಾನಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಶಾಲಾ ಪ್ರಾರಂಭೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಶಾಲೆಯ ಮುಖ್ಯಗುರು ಬಂದೋಲಿ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ, ವಿದ್ಯಾರ್ಥಿಗಳು ಸಮಯ ಪಾಲನೆಯೊಂದಿಗೆ ನಿರಂತರ ಅಧ್ಯಯನದ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಲು ಸಲಹೆ ನೀಡಿದರು. ಸಮಾರಂಭದಲ್ಲಿ ಶಿಕ್ಷಕರಾದ ರವಿ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿಗಳಿದ್ದರು.

ಶವ ಪತ್ತೆ: ಕೊಲೆ ಶಂಕೆ
ರಾಯಚೂರು: ಮಾನವಿ ತಾಲೂಕಿನ ಸಿರವಾರ ಗ್ರಾಮದ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತನನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಮೃತನ ಮುಖ ಮತ್ತು ಕುತ್ತಿಗೆಗೆ ಹರಿತವಾದ ಆಯುಧದಿಂದ ಹೊಡೆದು ಭಾರಿ ಗಾಯಗೊಳಿಸಿ ಕೊಲೆ ಮಾಡಿ ನಂತರ ಗುರುತು ಸಿಗದಂತೆ ಮಾಡಿ ಸಣ್ಣ ಬ್ಯಾರೆಲ್‌ನಲ್ಲಿ ಹಾಕಿ ಕಾಲುವೆಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಯದ ಅಭಾವ; ಜಿಲ್ಲಾ ಸಾಹಿತ್ಯ ಸಮ್ಮೇಳನ ಮುಂದಕ್ಕೆ
ಸುರಪುರ: ಜೂನ್ ಎರಡನೇ ವಾರದಲ್ಲಿ ನಡೆಯಬೇಕಾಗಿದ್ದ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಶಾಂತಪ್ಪ ಬೂದಿಹಾಳ ತಿಳಿಸಿದ್ದಾರೆ.
ರಂಗಂಪೇಟೆಯ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಸಭೆಯಲ್ಲಿ ಸದಸ್ಯರ ಒಪ್ಪಿಗೆ ಮೇರೆಗೆ ಜೂನ್ ಎರಡನೇ ವಾರದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ಮಾಡಬೇಕಾಗಿತ್ತು. ಅಲ್ಲದೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೂವರು ಶಾಸಕರ ಅನುಮತಿ ಪಡೆಯಬೇಕು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕು. ಇಷ್ಟೆಲ್ಲಾ ಕಾರ್ಯವನ್ನು ಕೆಲವೇ ದಿನಗಳಲ್ಲಿ ಮಾಡಿಕೊಂಡು ಸಮ್ಮೇಳನ ನಡೆಸುವುದು ಕಷ್ಟ ಎಂದು ಭಾವಿಸಿ ಸಮ್ಮೇಳನ ಮುಂದೂಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.