ಧರ್ಮದಿಂದ ಮಾನವನಿಗೆ ಸಂಸ್ಕಾರ: ಕಂಬಾಳಿಶ್ರೀ
ಮಸ್ಕಿ: ಧರ್ಮವು ಮನುಷ್ಯನಿಗೆ ಸಂಸ್ಕಾರವನ್ನು ನೀಡುತ್ತದೆಂದು ತೆಕ್ಕಲಕೋಟೆಯ ಕಂಬಾಳಿ ಮಠದ ವೀರಭದ್ರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಹೊರವಲಯದಲ್ಲಿ ಲಿಂ. ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮಿಗಳ 53ನೇ ಪುಣ್ಯಾರಾಧನೆಯ ನಿಮಿತ್ತ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿ, ವೈಜ್ಞಾನಿಕ ಯುಗದಲ್ಲಿ ಏನೇ ಸೌಲಭ್ಯಗಳು ಒದಗಿದ್ದರೂ ಮನುಷ್ಯನಿಗೆ ನೆಮ್ಮದಿ ಮಾತ್ರ ಇಲ್ಲ. ಮನುಷ್ಯನಿಗೆ ನೆಮ್ಮದಿ ದೊರೆಯಲು ಧರ್ಮದಿಂದ ಪಡೆಯುವ ಉತ್ತಮ ಸಂಸ್ಕಾರದಿಂದ ಮಾತ್ರ ಸಾಧ್ಯವೆಂದು ಹೇಳಿದರು. ಶಾಸಕ ಪ್ರತಾಪಗೌಡ ಪಾಟೀಲ್, ಕೊಪ್ಪಳ ಸಂಸದ ಶಿವರಾಮೇಗೌಡ, ಸಿರುಗುಪ್ಪದ ಮಾಜಿ ಶಾಸಕ ಚಂದ್ರಶೇಖರಯ್ಯ ಸ್ವಾಮಿ, ಸಿರುಗುಪ್ಪ ಜಿಪಂ ಸದಸ್ಯ ಮಲ್ಲಿಕಾರ್ಜುನ ಸ್ವಾಮಿ, ಹೊಸಪೇಟೆಯ ನಿವೃತ್ತ ಅಧಿಕಾರಿ ಎಂ. ಮಲ್ಲಿಕಾರ್ಜುನ ಸ್ವಾಮಿ, ಡಾ. ಬಿ.ಎಚ್. ದಿವಟರ್, ಡಾ. ಪಂಚಾಕ್ಷರಯ್ಯ ಹಿರೇಮಠ, ವೀರಭದ್ರಯ್ಯ ಸ್ವಾಮಿ ಕಂಬಾಳಿಮಠ, ಬಸಯ್ಯ ಸ್ವಾಮಿ ಕಂಬಾಳಿಮಠ, ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಈ ವೇಳೆ ಶಾಸಕ ಪ್ರತಾಪಗೌಡ ಪಾಟೀಲ್ರನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು.
ಬಹುಮಾನಕ್ಕಾಗಿ ಅರ್ಜಿ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ 2012- 13ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿದವರಿಂದ ನಗದು ಬಹುಮಾನ ನೀಡುವ ಯೋಜನೆಯಡಿ ಅರ್ಜಿ ಕರೆಯಲಾಗಿದೆ. ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ ಅಂತಿಮ ಪರೀಕ್ಷೆ, ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಪದವಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ನೀಡುವ ಯೋಜನೆ ಇದಾಗಿದೆ. ಅರ್ಜಿಗಳನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಸಿಂಧನೂರು ಇವರಿಂದ ಪಡೆದು ಅರ್ಜಿಯೊಂದಿಗೆ ಮೂಲ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ದೃಢೀಕರಿಸಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದೊಂದಿಗೆ ಸಂಪೂರ್ಣ ವಿವರದೊಂದಿಗೆ ಅರ್ಜಿಗಳನ್ನು ಜೂ. 30ರೊಳಗೆ ಸಲ್ಲಿಸುವಂತೆ ಸಿಂಧನೂರು ಸಮಾಜ ಕಲ್ಯಾಣಾಧಿಕಾರಿ ಪ್ರಕಟಣೆ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

