ರಾಯಚೂರು

'ಕುಷ್ಠರೋಗವೇ... ಗಾಬರಿ ಬೇಡ'

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.4
ಕುಷ್ಠರೋಗ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ರೋಗದ ಬಗ್ಗೆ ಗಾಬರಿಯಾಗುವುದು ಬೇಡ. ಇದನ್ನು ಬಹುವಿಧ ಔಷಧ ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರಬಾಬು ಹೇಳಿದರು.
ತಾಲೂಕಿನ ದಡೇಸ್ಗೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆಯ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕುಷ್ಠ ವಿಭಾಗ ರಾಯಚೂರು, ತಾಲೂಕು ಆರೋಗ್ಯಾಧಿಕಾರಿಗಳು ಸಿಂಧನೂರ ಆಶ್ರಯದಲ್ಲಿ ಕುಷ್ಠ ರೋಗ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಂಕ್ರಾಮಿಕ ರೋಗ: ಕುಷ್ಠರೋಗ ಮೈಕೋ ಬ್ಯಾಕ್ಟೀರಿಯಂ ಲೆಪ್ರಾಬೆಸಿಲೆ ಎಂಬ ರೋಗಾಣುವಿನಿಂದ ಬರುತ್ತದೆ. ಈ ರೋಗದ ಲಕ್ಷಣ ಕಾಣಿಸಿಕೊಳ್ಳಲು 2ರಿಂದ 5 ವರ್ಷ ಬೇಕಾಗುತ್ತದೆ. ಕುಷ್ಠ ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಬಹಳ ಕಾಲದ ನಿಕಟ ಸಂಪರ್ಕದಿಂದ ಹರಡುತ್ತದೆ. ಶೇ. 20ರಷ್ಟು ರೋಗಿಗಳು ಕೆಮ್ಮಿದಾಗ ಅಥವಾ ಸೀನಿದಾಗ ಕುಷ್ಠ ರೋಗ ಹರಡಲು ಕಾರಣವಾಗುತ್ತದೆ ಎಂದು ಮಾಹಿತಿ ನೀಡಿದರು.
ಮುನ್ನೆಚ್ಚರಿಕೆ ಅಗತ್ಯ: ತಾಲೂಕು ಆರೋಗ್ಯಾಧಿಕಾರಿ ಡಾ. ಸೈಯದ್ ಹಸನ್ ಹುಸೇನ್ ಮಾತನಾಡಿ, ರೋಗ ಬರುವುದಕ್ಕಿಂತ ಮುಂಚಿತವಾಗಿ ಎಚ್ಚರಿಕೆ ವಹಿಸುವುದು ಅವಶ್ಯ. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ಸಾರ್ವಜನಿಕರು ಕುಷ್ಠರೋಗ ಬಂದವರ ಬಳಿ ಕುಳಿತುಕೊಳ್ಳದೆ ಅಂತರ ಕಾಪಾಡಿಕೊಳ್ಳಬೇಕು ಎಂದರು.
ವೈದ್ಯಾಧಿಕಾರಿಗಳಾದ ಡಾ. ಎಂ.ವಿ. ವಿದ್ಯಾಶ್ರೀ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ಹಿರಿಯ ಆರೋಗ್ಯ ಮೇಲ್ವಿಚಾರಕ ಪಿ.ವೆಂಕಟೇಶ, ಮಲೇರಿಯಾ ಮೇಲ್ವಿಚಾರಕ ಎಫ್.ಎ. ಹಣಿಗಿ, ಹಿರಿಯ ಆರೋಗ್ಯ ಸಂದರ್ಶಕಿ ಎ.ಐ. ಪಾಟೀಲ್, ಕಿ.ಆ.ಸ ಸಂಗನಗೌಡ, ರೇಖಾ ಬಾಳಮ್ಮ ಶೂಶ್ರೂಷಕಿಯರಾದ ವಾಣಿಶ್ರೀ, ವಿನೋದಾ, ಧನಲಕ್ಷ್ಮೀ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.