ನೀರು ಶುದ್ಧೀಕರಣ ಘಟಕ ಅಳವಡಿಸಲು ಯತ್ನ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.4
ಸಚಿವ ಎಚ್.ಕೆ. ಪಾಟೀಲ್ ಅವರು ಗದಗನಲ್ಲಿ ಜಾರಿಗೆ ತಂದಿರುವ ಕುಡಿಯುವ ನೀರಿನ ಯೋಜನೆ ಮಾದರಿಯಲ್ಲಿ ಶುದ್ಧೀಕರಣ ಘಟಕ ಅಳವಡಿಸಿ 2ಕ್ಕೆ 25 ಲೀಟರ್ ಕುಡಿಯುವ ನೀರನ್ನು ಪೂರೈಸಲು ಪ್ರಾಮಾಣಿಕವಾಗಿ ಪ್ರಯತ್ನಿಸತ್ತೇನೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಭರವಸೆ ನೀಡಿದರು.
ನಗರದಲ್ಲಿ ಮಂಗಳವಾರ ಎ.ಕೆ. ಗೋಪಾಲನಗರದ ನಿವಾಸಿಗಳೊಂದಿಗೆ ಚರ್ಚಿಸಿದ ಅವರು ಎ.ಕೆ.ಗೋಪಾಲನಗರದಲ್ಲಿ 10 ದಿನ ಕಳೆದರೂ ನೀರು ಬಾರದಿರುವುದಕ್ಕೆ ಜನತೆ ರೋಸಿ ಹೋಗಿದ್ದಾರೆ. ಅವರ ಆಹ್ವಾನದ ಮೇರೆಗೆ ಇಲ್ಲಿನ ಸ್ಥಿತಿಗತಿ ತಿಳಿದುಕೊಳ್ಳಲು ಭೇಟಿ ನೀಡಿದ್ದಾಗಿ ಹೇಳಿದರು.
ತಾತ್ಕಾಲಿಕವಾಗಿ ಪ್ರಸ್ತುತ ಇರುವ ಕೆರೆಯನ್ನು ಅಭಿವೃದ್ಧಿಗೊಳಿಸುವ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಸಾಧ್ಯವಾದಷ್ಟು ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತೊಂದರೆ: ಶಾಲಾ ಕಾಂಪೌಂಡ್ನಲ್ಲಿ ಬೋರ್ವೆಲ್ ಇರುವುದರಿಂದ ಅದರ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಶಾಸಕರ ಗಮನ ಸೆಳೆದರು. ಕಳೆದ 10 ದಿನಗಳಿಂದ ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದು, ಐದಾರು ಕಿಮೀ ದೂರದಲ್ಲಿರುವ ಅಮರಾಪುರ ಗ್ರಾಮದಿಂದ ಕುಡಿವ ನೀರು ತರುತ್ತಿರುವುದಾಗಿ ತಿಳಿಸಿದ ನಿವಾಸಿಗಳು, ತಕ್ಷಣ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆ ನೀರಿನಿಂದಾಗುವ ತೊಂದರೆ ಬಗೆಹರಿಸುವಂತೆ ವಿನಂತಿಸಿದರು. ಮಳೆಯ ನೀರಿನಿಂದ ಆಗುವ ತೊಂದರೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತ ನಾಸೀರ್ ಅಲಿ ಅವರಿಗೆ ಸೂಚಿಸಿದರು.
ಸೂಚನೆ: ಬಡಾವಣೆಯ ಚರಂಡಿ ನಿರ್ಮಾಣ, ರಸ್ತೆ ಮಹಿಳಾ ಶೌಚಾಲಯ, ಮತ್ತಿತರ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ. ವಾರ್ಡ್ನ ನಿವಾಸಿಗಳು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರಸ್ತೆಯ ಮೇಲೆ ನೀರು ಹರಿಯದಂತೆ ಜಾಗ್ರತೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶೇಖರಪ್ಪ ಗಿಣಿವಾರ, ಜಾಫರ್ ಅಲಿ ಜಾಗೀರದಾರ, ಪ್ರಭುರಾಜ, ಮುಬಾರಕ್ ಬೇಗಂ, ಖಾದರಸಾಬ, ಎಇಇ ಗಂಗಾಧರ, ಜೆ.ಇ. ಮೂರ್ತಿ, ಯೋಜನಾಧಿಕಾರಿ ದುರುಗಪ್ಪ ಹಸಮಕಲ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

