ರಾಯಚೂರು

ವೃದ್ಧೆ ಅಚ್ಚಮ್ಮ ನಾಪತ್ತೆ

Published On :

ಸಿಂಧನೂರು: ನಗರದ ವಾರ್ಡ್ ನಂ 15ರ ಖದರಿಯಾ ಕಾಲೋನಿಯ ನಿವಾಸಿ ಅಚ್ಚಮ್ಮ ಗಂಡ ಹನುಮಂತಪ್ಪ ಭೋವಿ ಜೂ.1ರಂದು ಸುಕಾಲಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಕುಟುಂಬದವರು ದೂರವಾಣಿ ಕರೆ ಮಾಡಿ ಸಂಬಂಧಿಗಳೆಲ್ಲರನ್ನು ಸಂಪರ್ಕಿಸಿದ್ದು ಅಲ್ಲಿಯೂ ಇಲ್ಲವೆಂದು ತಿಳಿದು ಬಂದಿದೆ. ಈ ಕುರಿತು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ವೃದ್ಧೆ ಯಾರಿಗಾದರೂ ಕಂಡು ಬಂದಲ್ಲಿ ಮೊ. 9845488661, 9880663521ಕ್ಕೆ ಸಂಪರ್ಕಿಸಲು ಹನುಮಂತಪ್ಪ ಭೋವಿ ವಿನಂತಿಸಿದ್ದಾರೆ.

ವಿವಿಧ ಕೋರ್ಸುಗಳಿಗೆ ಪ್ರವೇಶ ಆರಂಭ
ಯಾದಗಿರಿ: ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ 2013- 14ನೇ ಸಾಲಿಗಾಗಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ. ಬಿಎ, ಬಿಕಾಂ, ಬಿಸಿಎ, ಬಿಬಿಎಂ, ಬಿಎಸ್ಸಿ ಕೋರ್ಸ್‌ಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಜೂ.1ರಿಂದ ಪ್ರವೇಶ ಪ್ರಾರಂಭವಾಗಿದ್ದು, ದಂಡ ಶುಲ್ಕವಿಲ್ಲದೆ ಜೂ.25ರ ವರೆಗೆ ಪ್ರವೇಶ ಪಡೆಯಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.