ಸಮನ್ವಯದಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ರಾಯಚೂರು: ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ ದೌರ್ಜನ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ಸಭೆ ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಚುನಾಯಿತ ಸದಸ್ಯರು ಹಾಗೂ ಅಧಿಕಾರಿಗಳು ದೌರ್ಜನ್ಯ ಸಮಿತಿ ಸದಸ್ಯರಾಗಿದ್ದು, ಹಲವಾರು ಜನ ಪ್ರತಿನಿಧಿಗಳು ಬದಲಾವಣೆ ಗೊಂಡಿರುವುದರಿಂದ ಸಮಿತಿ ಪುನಾರಚಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ವರದಿಯಾದಾಗ ತಮ್ಮ ಗಮನಕ್ಕೆ ಮಾಹಿತಿ ನೀಡುತ್ತಿಲ್ಲವೆಂದು ಸಿಂಧನೂರು, ಮಾನವಿ, ಇತರೆ ತಾಲೂಕು ಅಧಿಕಾರಿಗಳು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು.
ಎಸ್ಪಿ ಎಸ್.ಬಿ. ಬಿಸನಳ್ಳಿ ಸಭೆಯಲ್ಲಿ ಮಾತನಾಡಿ, ಪೊಲೀಸ್ ಅಧಿಕಾರಿಗಳೊಂದಿಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಸಮನ್ವಯತೆ ಕೊರತೆಯಿಂದ ಮಾಹಿತಿ ಕೊರತೆಯಾಗುತ್ತಿದೆ. ಆದ್ದರಿಂದ ತಿಂಗಳಿಗೊಮ್ಮೆಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕವಿರಿಸಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ್, ಎಲ್ಲ ತಾಲೂಕುಗಳ ತಹಸೀಲ್ದಾರರು, ಸಮಿತಿ ಸದಸ್ಯರಾದ ಹುಸೇನಪ್ಪ ಬಂಡಾರಿಗಲ್, ಪ್ರೇರಣಾ ಸಂಸ್ಥೆಯ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

